ಬೆಂಗಳೂರು

ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ನಿಮ್ಮ ಸಹಕಾರ ಹೆಚ್ಚು ಬೇಕು; ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಸಿದ್ದರಾಮಯ್ಯಕರೆ

ಬೆಂಗಳೂರು: ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭಾಶಯ ಕೋರಿ ಮಾತನಾಡಿದ ಸಿಎಂ, ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ ಪರವಾಗಿ ಇರುವುದಿಲ್ಲ. ಆದರೆ, ಆತ್ಮವಿಶ್ವಾಸ ಕಳೆದುಕೊಳ್ಳದೇ ಧೈರ್ಯದಿಂದ ಸಮಸ್ಯೆಗಳು ಹಾಗೂ ಸಂದರ್ಭಗಳನ್ನು ನಿರ್ವಹಿಸಿ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ ಎಂದರು.

ಆಡಳಿತಾಂಗದಲ್ಲಿ ಐಎಎಸ್, ಐಪಿಎಸ್, ಐಆರ್​​ಎಸ್ ಹಾಗೂ ಐಎಫ್​ಎಸ್ ಅಧಿಕಾರಿಗಳ ಜವಾಬ್ದಾರಿ ಹೆಚ್ಚು. ನಾವು ಕಾನೂನುಗಳನ್ನು ರಚಿಸಿ, ಜಾರಿ ಆಗುವ ದಿಕ್ಕಿನಲ್ಲಿ ನಿರಂತರ ನಿಗಾ ವಹಿಸುತ್ತೇವೆ. ಅಧಿಕಾರಿ ವರ್ಗ ಸಮಾಜಕ್ಕೆ ಪೂರಕವಾಗಿ ಕ್ರಿಯಾಶೀಲತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಸಂವಿಧಾನ‌ ಜಾರಿ ಸಂದರ್ಭದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಆಡಿದ ಮಾತುಗಳನ್ನು ಉಲ್ಲೇಖಿಸಿದ ಸಿಎಂ, ಸಮಾಜದ ಎಲ್ಲ ವರ್ಗಗಳಿಗೆ ಸಾಮಾಜಿಕ, ಆರ್ಥಿಕ‌ ಸ್ವಾತಂತ್ರ್ಯ ಒದಗಿಸಬೇಕು. ಇಲ್ಲದಿದ್ದರೆ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುವುದಿಲ್ಲ ಎಂದು ಹೇಳಿದರು.

Related Articles

Leave a Reply

Your email address will not be published. Required fields are marked *

Back to top button