
ಪಾಕಿಸ್ತಾನದ ವಿರುದ್ಧ ಯುದ್ಧ ಮಾಡುವುದು, ಬಿಡುವುದು ಕೇಂದ್ರ ಸರ್ಕಾರಕ್ಕೆ ಬಿಟ್ಟ ವಿಚಾರ. ಕಾಂಗ್ರೆಸ್ ನಾಯಕರ ಹೇಳಿಕೆಯಿಂದಲೇ ಅವರು ಪಾಕಿಸ್ತಾನದಲ್ಲಿ ಪ್ರಸಿದ್ಧಿ ಪಡೆದುಕೊಳ್ಳುತ್ತಿದ್ದಾರೆ. ಸಿದ್ಧರಾಮಯ್ಯ ಅವರು. ಪಾಕಿಸ್ತಾನದಲ್ಲಿ ಪಾಪ್ಯುಲರ್ ಆಗಿದ್ದಾರೆ ಅವರನ್ನ ಪಾಕಿಸ್ತಾನಕ್ಕೆ ಕಳುಹಿಸೋದು ಒಳ್ಳೆಯದು ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು ಪಾಕಿಸ್ತಾನದ ಬಗ್ಗೆ ನಿಲುವು ತೋರುತ್ತಿರುವುದು ಸರಿಯಲ್ಲ. ಮುಸ್ಲೀಂರ ಪರವಾಗಿ ನಿಲುವು ವ್ಯಕ್ತಪಡಿಸುವುದು ಸರಿಯಲ್ಲ. ಈ ಹೇಳಿಕೆಯಿಂದಲೇ ಕಾಂಗ್ರೆಸ್ ಪಕ್ಷದಲ್ಲಿ ಈಗಾಗಲೇ ಅವರ ಹೈಕಮಾಂಡ್ ವಾರ್ನಿಂಗ್ ನೀಡಿದ್ದಾರೆ. ಇದನ್ನ ಸಿಎಂ ಹಾಗೂ ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದರು