ಧಾರವಾಡರಾಜ್ಯಹುಬ್ಬಳ್ಳಿ

ಧಾರವಾಡದಲ್ಲಿ ವಿದ್ಯಾರ್ಥಿಗಳ ನೂತನ ವಸತಿ ನಿಲಯ ಉದ್ಘಾಟಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.

ಧಾರವಾಡದಲ್ಲಿ ವಿದ್ಯಾರ್ಥಿಗಳ ನೂತನ ವಸತಿ ನಿಲಯ ಉದ್ಘಾಟಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಧಾರವಾಡ ನಗರದ ಧಾರವಾಡ ಉದಯ ಹಾಸ್ಟೆಲ್ ಬಳಿ ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಲೋಕೋಪಯೋಗಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ 2023-24ನೇ ಸಾಲಿನ ಠೇವಣಿ ವಂತಿಗೆ ಅಡಿಯಲ್ಲಿ ದೀನ್ ದಯಾಳ ಉಪಾಧ್ಯಾಯ ಅವರ ಹೆಸರಿನಡಿ ಸೌಹಾರ್ಧ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಈ ವಸತಿ ನಿಲಯಗಳನ್ನು ನಿರ್ಮಿಸಲಾಗಿದೆ.
ವಿಶಾಲವಾದ ಪ್ರದೇಶದಲ್ಲಿ ಒಟ್ಟು ಆರು ಬ್ಲಾಕ್ ಅಡಿ ವಸತಿ ನಿಲಯಗಳನ್ನು ನಿರ್ಮಿಸಲಾಗಿದೆ. ಒಟ್ಟು 1 ಸಾವಿರ ವಿದ್ಯಾರ್ಥಿಗಳು ವಸತಿ ಮಾಡಬಹುದಾದ ವಸತಿ ನಿಲಯಗಳು ಇವಾಗಿವೆ. ಹೈಟೆಕ್ ವಸತಿ ನಿಲಯಗಳು ಇವಾಗಿದ್ದು, ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗಿದೆ.
ಕೇಂದ್ರ ಸಚಿವ ಜೋಶಿ ಅವರು ವಸತಿ ನಿಲಯಗಳನ್ನು ಉದ್ಘಾಟಿಸಿ ನೂತನವಾಗಿ ನಿರ್ಮಾಣಗೊಂಡ ಕಟ್ಟಡವನ್ನು ವೀಕ್ಷಿಸಿದರು. ನಂತರ ವೇದಿಕೆಯಲ್ಲಿ ದೀಪ ಬೆಳಗಿಸಿ ದೀನ್ ದಯಾಳ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

Related Articles

Leave a Reply

Your email address will not be published. Required fields are marked *

Back to top button