ಭದ್ರತಾ ಮಾಕ್ ಡ್ರಿಲ್; ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸೈರನ್..?

ಮಾಕ್ ಡ್ರಿಲ್ ಎಂದರೇನು?
ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಯಾವ ರೀತಿ ನಮ್ಮನ್ನು ರಕ್ಷಿಸಿಕೊಳ್ಳಬೇಕು. ಆ ಪರಿಸ್ಥಿತಿ ಹೇಗಿರುತ್ತದೆ ಎಂದು ನೈಜ ಘಟನೆಯಂತೆಯೇ ಈ ಮಾಕ್ ಡ್ರಿಲ್ ನಡೆಯುತ್ತೆ. ಅಪಾಯದ ಸನ್ನಿವೇಶಗಳಲ್ಲಿ ಯಾವುದೇ ಹಾನಿಯಾಗದಂತೆ ಎಚ್ಚರಿಕೆ ವಹಿಸಿ, ಅದನ್ನು ಅಣಕು ಪ್ರದರ್ಶನ ಮಾಡಲಾಗುವುದು. ಮುಖ್ಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ, ಜನರ ರಕ್ಷಣೆ, ಶತ್ರುಗಳ ದಾಳಿ ವೇಳೆ ಸಾರ್ವಜನಿಕ ಸುರಕ್ಷತೆಗೆ ಬೇಕಾದ ಕ್ರಮಗಳ ಬಗ್ಗೆ ಪೂರ್ವಾಭ್ಯಾಸ ಮಾಡುವುದಾಗಿದೆ.
ಪೆಹಲ್ಗಾಮ್ ಭಯೋತ್ಪಾದಕ ದಾಳಿ ನಂತರ ಪಾಕ್ ಜೊತೆ ಯುದ್ಧದ ಸನ್ನಿವೇಶ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಬುಧವಾರ (ಮೇ 7) ಭದ್ರತಾ ಮಾಕ್ ಡ್ರಿಲ್ ನಡೆಯಲಿದೆ. ಗೃಹ ಸಚಿವಾಲಯದ ನಿರ್ದೇಶನದಂತೆ ಕರ್ನಾಟಕದ ಮೂರು ಸ್ಥಳಗಳಲ್ಲಿ ಅಣಕು ಕವಾಯತುಗಳನ್ನು ನಡೆಸಲಾಗುವುದು ಎಂದು ಕರ್ನಾಟಕ ಪೊಲೀಸ್ ಇಲಾಖೆ ಹೇಳಿದೆ. ಯುದ್ಧದ ಸಂದರ್ಭದಲ್ಲಿ ಸಾರ್ವಜನಿಕರು ಏನು ಮಾಡಬೇಕು ಎಂಬ ವಿಷಯಗಳ ಕುರಿತು ಕೇಂದ್ರ ಸರ್ಕಾರವು ಈ ಮಾಕ್ ಡ್ರಿಲ್ ಮೂಲಕ ಮಾರ್ಗಸೂಚಿಗಳನ್ನು ನೀಡುತ್ತಿದೆ. ಇಂದು ಸಂಜೆ 4 ಗಂಟೆಗೆ ಈ ಮಾಕ್ ಡ್ರಿಲ್ ನಡೆಯಲಿದೆ.
ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸೈರನ್?
ಇಂಡಿಯನ್ ಇನ್ಸ್ಟಿಟ್ಯೂಟ್, ರಾಜಾಜಿನಗರ ಇಎಸ್ಐ ಆಸ್ಪತ್ರೆ, ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ (ಎನ್‌ಎಎಲ್), ಬೆಂಗಳೂರು ಡೈರಿ, ಕೆನರಾ ಬ್ಯಾಂಕ್, ಪೀಣ್ಯ ಎಸ್‌ಆರ್‌ಎಸ್, ವಿವಿ ಟವರ್ ಅಗ್ನಿಶಾಮಕ ಠಾಣೆ, ಜ್ಞಾನಭಾರತಿ ಅಗ್ನಿಶಾಮಕ ಠಾಣೆ, ಥಣಿಸಂದ್ರ ಅಗ್ನಿಶಾಮಕ ಠಾಣೆ, ಯಶವಂತಪುರ ಅಗ್ನಿಶಾಮಕ ಠಾಣೆ, ಬನಶಂಕರಿ ಅಗ್ನಿಶಾಮಕ ಠಾಣೆ, ರಾಜಾಜಿನಗರ ಅಗ್ನಿಶಾಮಕ ಠಾಣೆ, ಚಾಮರಾಜಪೇಟೆ ಅಗ್ನಿಶಾಮಕ ಠಾಣೆ, ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ, ಹಲಸೂರು ಗೇಟ್ ಪೊಲೀಸ್ ಠಾಣೆ, ಉಪ್ಪಾರಪೇಟೆ ಪೊಲೀಸ್ ಠಾಣೆ, ಆರ್‌ಆರ್ ನಗರ ಪೊಲೀಸ್ ಠಾಣೆ, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ, ಕೆಆರ್ ಮಾರುಕಟ್ಟೆ ಪೊಲೀಸ್ ಠಾಣೆ, ವಯ್ಯಾಲಿಕಾವಲ್ ಪೊಲೀಸ್ ಠಾಣೆ, ಹಲಸೂರು ಗೃಹರಕ್ಷಕ ಕೇಂದ್ರ ಕಚೇರಿ, ಬೆಂಗಳೂರು ಗ್ರಾಮಾಂತರ ಗೃಹರಕ್ಷಕ ಕಚೇರಿ, ಬಾಗಲೂರು ಅಗ್ನಿಶಾಮಕ ಠಾಣೆ, ಪೀಣ್ಯ ಅಗ್ನಿಶಾಮಕ ಠಾಣೆ, ಅಂಜನಪುರ ಅಗ್ನಿಶಾಮಕ ಠಾಣೆ, ಐಟಿಪಿಎಲ್ ಅಗ್ನಿಶಾಮಕ ಠಾಣೆ, ಸರ್ಜಾಪುರ ರಸ್ತೆ ಅಗ್ನಿಶಾಮಕ ಠಾಣೆ, ಎಲೆಕ್ಟ್ರಾನಿಕ್ಸ್ ಸಿಟಿ ಅಗ್ನಿಶಾಮಕ ಠಾಣೆ, ಡೈರಿ ಸರ್ಕಲ್ ಅಗ್ನಿಶಾಮಕ ಠಾಣೆ