
ಬೆಂಗಳೂರು: ಆಪರೇಷನ್ ಸಿಂಧೂರ್ ಮೂಲಕ ಉಗ್ರರ ವಿರುದ್ಧ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದ್ದಕ್ಕೆ ರಾಜಕೀಯ ನಾಯಕರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಹೀಗಿರುವಾಗಲೇ ರಾಜ್ಯ ಕಾಂಗ್ರೆಸ್ ‘ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ’ ಎಂದು ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಕಾಂಗ್ರೆಸ್ ನ ಈ ಟ್ವೀಟ್ ನಿಂದಾಗಿ ಜನರ ತೀವ್ರ ಆಕ್ರೋಶವನ್ನ ವ್ಯಕ್ತಪಡಿಸಿದ್ದು, ಕರ್ನಾಟಕ ಕಾಂಗ್ರೆಸ್‌ನ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ಆ ಟ್ವೀಟ್ನ್ನು ಡಿಲೀಟ್ ಮಾಡಿದೆ.
ಭಯೋತ್ಪಾದಕರು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಎಸಗಿದ ಹೇಡಿತನದ ಪೈಶಾಚಿಕ ಕೃತ್ಯಕ್ಕೆ ನಮ್ಮ ಹೆಮ್ಮೆಯ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಭಯೋತ್ಪಾದನೆಯ ಮೂಲೋತ್ಪಾಟನೆಗೆ ಈ ದಿಟ್ಟ ಕ್ರಮ ಮುನ್ನುಡಿಯಾಗಲಿ. ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ. ಭಯೋತ್ಪಾದನೆಯ ವಿರುದ್ಧ, ದೇಶದ ಐಕ್ಯತೆ, ಸಮಗ್ರತೆ, ಸುರಕ್ಷತೆಗೆ ಸಂಬಂಧಿಸಿದಂತೆ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಎಲ್ಲ ಕ್ರಮಗಳನ್ನೂ ನಾವು ಬೆಂಬಲಿಸುತ್ತೇವೆ ಎಂದು ಕಾಂಗ್ರೆಸ್ ಇನ್ನೊಂದು ಟ್ವೀಟ್ ಮಾಡಿದೆ.