Uncategorized
ಉಗ್ರ ಪೋಷಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸುತ್ತದೆ;ಇದು ಪ್ರಾರಂಭವಷ್ಟೇ;ಯತ್ನಾಳ

ವಿಜಯಪುರ : ಭಾರತದಿಂದ ಆಪರೇಷನ್ ಸಿಂಧೂರಕ್ಕೆ ಸಂಬಂಧಿಸಿದಂತೆ ಭಾರತದ ಸೇನೆಯಿಂದ ನಡೆದ ಏರ್ ಸ್ಟ್ರೈಕ್ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ವಾಗತಿಸಿದ್ದಾರೆ. ಟ್ವೀಟ್ ಮೂಲಕ ಪ್ರತಿಕಾರದ ದಾಳಿಗೆ ಸ್ವಾಗತಿಸಿದ್ದು ಪ್ರಧಾನಿ ನರೇಂದ್ರ ಮೋದಿ ಜಿ ಅವರ ನೇತೃತ್ವದಲ್ಲಿ ಭಾರತದ ಸೇನೆ, ನೌಕಾ ಪಡೆ ಹಾಗೂ ವಾಯು ಪಡೆ ಉಗ್ರರ ನೆಲೆಯ ಮೇಲೆ ದಾಳಿ ಮಾಡಿ ಪಹಲ್ಲಾಮ್ ನಲ್ಲಿ ನಡೆದ ಅಮಾಯಕ ಪ್ರವಾಸಿಗರ ಹತ್ಯೆಯ ಪ್ರತೀಕಾರ ತೆಗೆದುಕೊಂಡಿದೆ ಇದು ಪ್ರಾರಂಭವಷ್ಟೇ.
ಉಗ್ರ ಪೋಷಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸುತ್ತದೆ. ಸಮಸ್ತ ಭಾರತೀಯರ ಪರವಾಗಿ ಈ ದಾಳಿಯನ್ನು ಸ್ವಾಗತಿಸುತ್ತೇನೆ ಹಾಗೂ ಸೇನೆ ಮತ್ತು ಸರ್ಕಾರದ ಜೊತೆ ನಾವೆಲ್ಲರೂ ನಿಲ್ಲೋಣ. ಭಾರತ ಮಾತೆಗೆ ಜಯವಾಗಲಿ, ಜೈ ಹಿಂದ್ ಎಂದು ಶಾಸಕ ಯತ್ನಾಳ ಪೊಸ್ಟ್ ಮಾಡಿದ್ದಾರೆ.