ಬೆಳಗಾವಿ

ಯುವನಿಧಿ ಯೋಜನೆಯ 2024ರ ನೋಂದಣಿ ಪ್ರಕ್ರಿಯೆ ಪ್ರಾರಂಭ , ಪೋಸ್ಟರ್ ಹಾಗೂ ಬ್ಯಾನರ ಅನಾವರಣ; ಪೌರಕಾರ್ಮಿಕರಿಗೆ ನೇಮಕಾತಿ ಆದೇಶಗ ವಿತರಣೆ.

ಬೆಳಗಾವಿ:  ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಇಂದು ನಡೆದ ಸಭೆಯಲ್ಲಿ, ಮೈಕ್ರೋ ಫೈನಾನ್ಸ್ ಸಂಬಂಧಿತ ಪ್ರಕರಣಗಳನ್ನು ಶೀಘ್ರದಲ್ಲೇ ಇತ್ಯರ್ಥಗೊಳಿಸಿ, ಜನರಿಗೆ ನ್ಯಾಯ ಒದಗಿಸುವ ದೃಷ್ಟಿಯಿಂದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಯಿತು.

ಈ ವೇಳೆ ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ 2024ರ ನೋಂದಣಿ ಪ್ರಕ್ರಿಯೆ ಪ್ರಾರಂಭ ಪೋಸ್ಟರ್ ಹಾಗೂ ಬ್ಯಾನರನ್ನು ಅನಾವರಣಗೊಳಿಸಿದ ನಂತರ ಪೌರಕಾರ್ಮಿಕರಿಗೆ ನೇಮಕಾತಿ ಆದೇಶಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಸಕ ಆಸೀಫ್‌ (ರಾಜು ) ಸೇಠ್‌, ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌, ಜಿಪಂ ಸಿಇಒ ರಾಹುಲ್‌ ಸಿಂಧೆ, ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್, ಡಿಸಿಪಿ ರೋಹನ್‌ ಜಗದೀಶ್‌ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Related Articles

Leave a Reply

Your email address will not be published. Required fields are marked *

Back to top button