
ಬೆಳಗಾವಿ: ಪಾಕ್ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ರಾಣಿ ಚನ್ನಮ್ಮ ವೃತ್ತದಲ್ಲಿರುವ ಗಣಪತಿ ಮಂದಿರದಲ್ಲಿ ಬುಧವಾರ ವಿಶೇಷ ಪೂಜೆ ಸಲ್ಲಿಸಿದರು.
ಭಾರತ ಸೈನ್ಯಕ್ಕೆ ಜೈಕಾರ ಕೂಗಿದ ಹಿಂದೂಪರ ಸಂಘಟನೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು. ಪಾಕಿಸ್ತಾನಕ್ಕೆ ದಿಕ್ಕಾರ ಕೂಗಿ ಹಿಂದೂ ಧರ್ಮಕ್ಕೆ ಜಯವಾಗಲಿ ಎಂದು ಘೋಷಣೆ ಕೂಗಿ ಕಾರ್ಯಕರ್ತರ ಹರ್ಷೋದ್ಘಾರ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ನಗರಸೇವಕ ಶಂಕರ ಪಾಟೀಲ್ ಪಾಕ್ ಮೇಲೆ ಕ್ಷಿಪಣಿ ದಾಳಿ ನಡೆಸಿ, ಪಿಎಂ ಮೋದಿ ಅವರು ಊಹೆಗೂ ಮೀರಿ ಉತ್ತರವನ್ನು ನೀಡುವುದಾಗಿ ಹೇಳಿದ ಮಾತನ್ನು ಉಳಿಸಿಕೊಂಡಿದ್ದು, ಭಾರತೀಯ ಸೇನೆ ಹಾಗೂ ಪಿಎಂ ಮೋದಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಭಾಗಿಯಾಗಿದ್ಧರು.