Uncategorized

ಜನ ಔಷಧಿ ಕೇಂದ್ರ ಬಂದ್ ವಿರೋಧಿಸಿ ವಿಜಯಪುರ ಸರ್ಕಾರಿ ಆಸ್ಪತ್ರೆಯ ಎದುರು ಬಿಜೆಪಿ ಪ್ರತಿಭಟನೆ

ಜನ ಔಷಧಿ ಕೇಂದ್ರ ಬಂದ್ ವಿರೋಧಿಸಿ ವಿಜಯಪುರ ಸರ್ಕಾರಿ ಆಸ್ಪತ್ರೆಯ ಎದುರು ಬಿಜೆಪಿ ಪ್ರತಿಭಟನೆ
ಬಡ ಹಾಗೂ ಮದ್ಯಮ ವರ್ಗದ ಜನರ ನೆರವಿಗಾಗಿ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಯೋಜನೆಯಡಿ ನಿರ್ಮಿಸಲಾದ ಜನ ಔಷಧಿ ಕೇಂದ್ರಗಳಿಗೆ ಇದೀಗ ರಾಜ್ಯ ಸರ್ಕಾರ ಕತ್ತರಿ ಹಾಕಿದೆ.
ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರ ನಗರದಲ್ಲಿ ವಿಜಯಪುರ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ಸಂಸದ ರಮೇಶ ಜಿಗಜಿಣಗಿ, ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಎಸ್.ಕೆ.ಬೆಳ್ಳುಬ್ಬಿ ಸೇರಿದಂತೆ ಪ್ರಮುಖರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು.
ಈ ವೇಳೆ ಮುಖಂಡರುಗಳು ದೇಶದ ಜನಸಾಮಾನ್ಯರಿಗೆ ಅಗತ್ಯ ಔಷಧಿಗಳನ್ನು ಶೇಕಡಾ 50 ರಿಂದ 80ರ ಷ್ಟು ರಿಯಾಯತಿ ದರದಲ್ಲಿ ಒದಗಿಸುವ ಕೇಂದ್ರದ ಯೋಜನೆಯೇ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಯೋಜನೆ ಯಾಗಿದೆ. ಆದರೆ ಈ ಯೋಜನೆಯಡಿ ನಿರ್ಮಿಸಲಾದ ಜನ ಔಷಧಿ ಕೇಂದ್ರಗಳಿಗೆ ಇದೀಗ ರಾಜ್ಯ ಸರ್ಕಾರ ಕತ್ತರಿ ಹಾಕಿದೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ರೋಗಿಗಳು ಯಾವುದೇ ಔಷಧವನ್ನು ಆಸ್ಪತ್ರೆಯ ಹೊರಗೆ ಖರೀದಿಸದಂತೆ ನೋಡಿಕೊಳ್ಳುವುದು ಸರ್ಕಾರದ ಆದ್ಯತೆಯಾಗಿದೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಅಂತ ರಾಜ್ಯ ಆರೋಗ್ಯ ಇಲಾಖೆ ತಿಳಿಸಿತ್ತು.
ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ಜನ ವಿರೋಧಿಯಾಗಿರುವ ಈ ನಿರ್ಧಾರ ಹಿಂಪಡೆಯುವಂತೆ ಆಗ್ರಹಿಸಿದರು.‌
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ರವಿ‌ ಬಗಲಿ, ಡಾ.ಸುರೇಶ ಬಿರಾದಾರ, ಚಂದ್ರಶೇಖರ ಕವಟಗಿ, ಪಾಲಿಕೆ ಸದಸ್ಯ ಮಳುಗೌಡ ಪಾಟೀಲ
ವಿಜು ಜೋಶಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button