
”ಪೆಹಲ್’ಗಾಮ್’ನಲ್ಲಿ ಉಗ್ರರು ನಡೆಸಿದ ನರಮೇಧಕ್ಕೆ ಪ್ರತೀಕಾರವಾಗಿ ‘ಆಪರೇಷನ್ ಸಿಂದೂರ’ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು ರಾಜ್ಯ ಕಾಂಗ್ರೆಸ್ ವತಿಯಿಂದ ಬೆಂಗಳೂರಿನಲ್ಲಿ ‘ತಿರಂಗಾ ಯಾತ್ರೆ’ ನಡೆಸಲಾಯಿತು.
ಪಹಲ್ಗಾಂ ಉಗ್ರರು ನಡೆಸಿದ ನರಮೇಧಕ್ಕೆ ಪ್ರತೀಕಾರವಾಗಿ ‘ಆಪರೇಷನ್ ಸಿಂದೂರ’ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು ರಾಜ್ಯ ಕಾಂಗ್ರೆಸ್ ವತಿಯಿಂದ ಇಂದು ಬೆಂಗಳೂರಿನಲ್ಲಿ ‘ತಿರಂಗಾ ಯಾತ್ರೆ’ ಹಮ್ಮಿಕೊಳ್ಳಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಬೆಳಗ್ಗೆ ಕೆ.ಆರ್.ವೃತ್ತದಿಂದ ದೇಶಪ್ರೇಮ ಮೆರೆಯೋಣ, ಐಕ್ಯತೆ ಸಾರೋಣ’ ಎಂಬ ಘೋಷವ್ಯಾಕ್ಯದಡಿ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ಇರುವ ಮಿನ್ಸ್ಕ್ಸ್ಕ್ವೇರ್ವರೆಗೆ ಬೃಹತ್ ತಿರಂಗಾ ಯಾತ್ರೆ ನಡೆಯಿತು.
ಈ ವೇಳೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ. ಪಾಟೀಲ್, ಎಚ್.ಸಿ. ಮಹಾದೇವಪ್ಪ, ಸೇರಿದಂತೆ ಸಚಿವರು, ಶಾಸಕರು, ಕೆಪಿಸಿಸಿ ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಸರ್ಕಾರಿ, ಖಾಸಗಿ ನೌಕರರು, ಚಿತ್ರರಂಗದವರು ಯುವ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.