
ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು: ಅನಿವಾರ್ಯವಾದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿ.ಎಂ ಸಿದ್ದರಾಮಯ್ಯ ಸ್ಪಷ್ಟ ಸೂಚನೆ
ಸಭೆಯಲ್ಲಿ ಸಿಎಂ ನೀಡಿದ ಇತರೆ ಸೂಚನೆಗಳು…
• ಕಾನೂನು ಸುವ್ಯವಸ್ಥೆಯೊಂದಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ.
• ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರಬೇಕು. ಈ ಕುರಿತು ರಾಜ್ಯ ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಮಾರ್ಗಸೂಚಿಯನ್ನು ಸಿದ್ಧಪಡಿಸಬೇಕು.
• ಪ್ರಮುಖ ಸ್ಥಳಗಳಲ್ಲಿ Mock Drill ಮಾಡಲು ಸೂಚನೆ ನೀಡಲಾಗಿದೆ.
• ರಾಷ್ಟ್ರೀಯ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆಯನ್ನು ಕಾಪಾಡಲು ಸೂಚನೆ.
• ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು.
*ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ ವಹಿಸಬೇಕು. ವದಂತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು.
•ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಫ್ಯಾಕ್ಟ್ ಚೆಕ್ ನಿರಂತರವಾಗಿ ಮಾಡಬೇಕು. ಸುಳ್ಳು ಸುದ್ದಿ ಬಗ್ಗೆ ಮೂಲದಲ್ಲೇ ಅಧಿಕೃತ ಸ್ಪಷ್ಟೀಕರಣ ನೀಡಬೇಕು.
• ಗುಪ್ತಚರ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು. ಸಾರ್ವಜನಿಕ ಸೇವೆ ಒದಗಿಸುವ ತಾಣಗಳಲ್ಲಿ ಹೆಚ್ಚಿನ ಸುರಕ್ಷತೆಯನ್ನು ಖಾತ್ರಿಪಡಿಸಬೇಕು.
• ಅಕ್ರಮ ದಾಸ್ತಾನು ಮತ್ತು ಕಾಳಸಂತೆಯ ಮೇಲೆ ನಿರಂತರ ನಿಗಾವಹಿಸಿ, ಅನಗತ್ಯವಾಗಿ ಸಾಮಾಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನು ತಡೆಯಬೇಕು.
ಅಗ್ನಿಶಾಮಕ ದಳದ ಕೇಂದ್ರಗಳು ದಿನದ 24ಗಂಟೆ ಸನ್ನದ್ಧ ಸ್ಥಿತಿಯಲ್ಲಿರಬೇಕು. ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದು, ಸಹಾಯವಾಣಿ ಆರಂಭಿಸಬೇಕು.
• ಪೌರ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಿ, ಅವರಿಗೆ ಸೂಕ್ತ ತರಬೇತಿಯನ್ನು ಒದಗಿಸಬೇಕು. ಎಲ್ಲಾ ಜಿಲ್ಲೆಗಳಲ್ಲಿ ಪೌರ ರಕ್ಷಣಾ ವ್ಯವಸ್ಥೆಗೆ ಸ್ವಯಂಸೇವಕರನ್ನು ನೇಮಕ ಮಾಡುವ ಕಾರ್ಯ ಆರಂಭಿಸಬೇಕು. ಆನ್ಲೈನ್ನಲ್ಲಿ ಹೆಸರು ನೋಂದಾಯಿಸಲು ವ್ಯವಸ್ಥೆ ಕಲ್ಪಿಸಬೇಕು.
. ಕರಾವಳಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಬೇಕು. ಎಲ್ಲಾ ಪ್ರಮುಖ ಸ್ಥಳಗಳಲ್ಲಿ ನಿರಂತರ ಗಸ್ತು ವ್ಯವಸ್ಥೆ ಮಾಡಬೇಕು.