
ಪೆಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಉಗ್ರರು ಅಮಾಯಕರನ್ನು ಬಲಿ ಪಡೆದಿದ್ದರು. ಇದಕ್ಕೆ ಭಾರತೀಯ ಸೇನೆ ಪ್ರತ್ಯುತ್ತರವಾಗಿ ಪಾಕ್‌ಗೆ ನುಗ್ಗಿ ಅಲ್ಲಿನ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು. ಆದರೂ ಬುದ್ಧಿ ಕಲಿಯದ ನರಿ ಬುದ್ಧಿ ಪಾಪಿಸ್ತಾನಕ್ಕೆ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ಅಡಿಯಲ್ಲಿ ತಿರುಗೇಟು ಕೊಡುವ ಕೆಲಸವನ್ನು ಮಾಡುತ್ತಿದ್ದು, ಇದಕ್ಕೆ ಬರೀ ದೇಶದ ಜನರಷ್ಟೇ ಅಲ್ಲದೆ, ವಿದೇಶಿಗರು ಸಹ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಚಿವ ಜಮೀರ್ ಅಹ್ಮದ್ ಅವರು ಕೂಡ ಪ್ರತಿಕ್ರಿಯಿಸಿದ್ದಾರೆ.
ಭಾರತ-ಪಾಕಿಸ್ತಾನದ ನಡುವೆ ಕ್ಷಣ ಕ್ಷಣಕ್ಕೂ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಲಿದೆ. ಪಾಕಿಸ್ತಾನ ತನ್ನ ನರಿ ಬುದ್ಧಿ ಮುಂದುವರೆಸಿದ್ದು, ಇದಕ್ಕೆ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ಅಡಿಯಲ್ಲಿ ತಕ್ಕ ಪ್ರತ್ಯುತ್ತರ ಕೊಡುತ್ತಿದೆ. ಈ ಕಾರ್ಯಾಚರಣೆ ಬಗ್ಗೆ ಸಚಿವ ಜಮೀರ್ ಅಹ್ಮದ್ ಅವರು ಪ್ರತಿಕ್ರಿಯಿಸಿ ತಮಗೆ ಅವಕಾಶ ಸಿಕ್ಕರೆ ಏನು ಮಾಡುತ್ತೇನೆ ಎಂದು ಹೇಳಿದ್ದಾರೆ
ಕಲಬುರಗಿಯಲ್ಲಿ ಇಂದು (ಮೇ 10) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಮನಸು ಮಾಡಿದರೆ ಎರಡೇ ದಿನದಲ್ಲಿ ಪಾಕಿಸ್ತಾನವನ್ನು ಸರ್ವನಾಶ ಮಾಡಬಹುದು. ಪಾಕಿಸ್ತಾನದವರ ಬಳಿ ಏನು ಇಲ್ಲ, ಅದು ಠುಸ್ ಪಟಾಕಿ ಇದ್ದಂತೆ ಎಮದು ಹೇಳಿದ್ದಾರೆ.
ನೀವು ದೇಶಕ್ಕಾಗಿ ಏನು ಮಾಡುತ್ತೀರಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಒಂದೇ ಒಂದು ಅವಕಾಶ ಕೊಟ್ಟರೆ ನಾನು ಸೂಸೈಡ್ ಬಾಂಬ್ ಹಾಕಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ಧ. ಪಾಕಿಸ್ತಾನ ಒಂದು ಖಾಲಿ ಡಬ್ಬ, ಠುಸ್ ಪಟಾಕಿಯಂತಿದೆ. ನಮ್ಮ ದೇಶಕ್ಕಾಗಿ ನಾನು ಏನು ಬೇಕಾದರೂ ಮಾಡಲು ಸಿದ್ಧ ಎಂದು ಹೇಳಿದರು ಈಗಾಗಲೇ ‘ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿ ಆಗಲಿ ಎಂದು ಶುಕ್ರವಾರ ನಾವು ಮಸೀದಿಗಳಲ್ಲಿ ಪ್ರಾರ್ಥನೆ ಮಾಡಿದ್ದೇವೆ. ದೇಶಕ್ಕೋಸ್ಕರ ನಾವು ಏನು ಮಾಡಿದರೂ ಕಡಿಮೆ. ಕೇಂದ್ರ ಸರ್ಕಾರ ಉತ್ತಮ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಹೇಳಿದರು.