Uncategorized
30 ಪ್ರಯಾಣಿಕರ ಪ್ರಾಣ ಉಳಿಸಿದ KSRTC ಬಸ್ ಚಾಲಕ

ದೊಡ್ಡಬಳ್ಳಾಪುರ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಟೈರ್ ಸ್ಫೋಟಗೊಂಡು, ನಿಯಂತ್ರಣ ತಪ್ಪಿ ರಸ್ತೆಯ ತಡೆಗೋಡೆಗೆ ಗುದ್ದಿದ ಘಟನೆ ಮೆಣಸಿಗೇಟ್ ಬಳಿ ನಡೆದಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದಾಗಿ 30ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಘಟನೆ ನಡೆದಿದೆ. ಸೂಲಿಕುಂಟೆ-ದೊಡ್ಡಬಳ್ಳಾಪುರ ಮಾರ್ಗದ ಬಸ್ ದೊಡ್ಡಬಳ್ಳಾಪುರ ನಗರಕ್ಕೆ ಬರುವ ವೇಳೆ ಬಸ್ನ ಟೈರ್ ಸ್ಪೋಟಗೊಂಡಿದೆ.
ಈ ವೇಳೆ ಚಾಲಕ ಮುನಿಶ್ಯಾಮಪ್ಪ ಸಮಯಪ್ರಜ್ಞೆಯಿಂದ ತಕ್ಷಣವೇ ಬಸ್ಸನ್ನು ತಡೆಗೋಡೆಯ ಕಡೆಗೆ ಚಲಾಯಿಸಿದ್ದಾರೆ. ತಡೆಗೋಡೆಯಿಂದಾಗಿ ಬಸ್ ನಿಯಂತ್ರಣಕ್ಕೆ ಬಂದಿದೆ. ತಡೆಗೋಡೆ ಇಲ್ಲದಿದ್ದಲ್ಲಿ ಹೆಚ್ಚಿನ ಅನಾಹುತವಾಗುವ ಸಾಧ್ಯತೆ ಇತ್ತು. ಚಾಲಕನ ಸಮಯಪ್ರಜ್ಞೆಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.