Uncategorized
ರಾಜ್ಯದ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದ ಸಿಎಂ
ರಾಜ್ಯದ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದ ಸಿಎಂ

ರಾಜ್ಯದ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದ ಮೂರು ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಲ್ಲಡೆ ಕಾಂಗ್ರೆಸ್ ಗೆ ಅನುಕೂಲಕರ ವಾತಾವರಣವಿದೆ. ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಎಲ್ಲೆಡೆ ಕಾಂಗ್ರೆಸ್ಗೆ ಒಳ್ಳೆಯ ಬೆಂಬಲ ದೊರಕುತ್ತಿದೆ.
ಇನ್ನು ಕೋವಿಡ್ ಕಾಲದಲ್ಲಿ ಬಿಜೆಪಿ ಸರ್ಕಾರದಿಂದ ನಡೆಸಲಾದ ಭ್ರಷ್ಟಾಚಾರವನ್ನು ಬೆಳಕಿಗೆ ತರುತ್ತೇವೆ. ಆಯೋಗದ ವರದಿಯ ಅನುಸಾರ ಯಡಿಯೂರಪ್ಪ ಹಾಗೂ ಶ್ರೀರಾಮುಲು ವಿರುದ್ಧ ಪ್ರಕರಣ ದಾಖಲಿಸುತ್ತೇವೆ ಎಂದರು.