
ಬೆಳಗಾವಿ : ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಆರೋಗ್ಯ ಇಲಾಖೆಯ “ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ”ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಸೋಳ್ಳೆಗಳಿಂದ ಉತ್ಪನ್ನವಾಗುವ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ ರೋಗಗಳು ಹರಡದಂತೆ ಕ್ರಮಕೈಗೊಳ್ಳಲು ಪಂಚಾಯತರಾಜ್ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಮಧುಮೇಹ(ಸಕ್ಕರೆ), ರಕ್ತದೊತ್ತಡ(ಬಿ.ಪಿ) ಖಾಯಿಲೆಗಳಿಗೆ ‘ಗೃಹ ಆರೋಗ್ಯ’ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಲ್ಲಿ ಔಷಧಿಗಳ ದಾಸ್ತಾನು ಇದ್ದು ಈ ಕಾರ್ಯಕ್ರಮದಲ್ಲಿ ಮನೆ-ಮನೆಗೆ ಔಷಧಿಯನ್ನು ವಿತರಿಸಲಾಗುತ್ತದೆ. ಈ ಕಾರ್ಯಕ್ರಮವನ್ನು ಬೆಳಗಾವಿ ಜಿಲ್ಲೆಯಲ್ಲಿ ಶೀಘ್ರವೇ ಪ್ರಾರಂಭಿಸಲಾಗುತ್ತಿದೆ. ಸ್ತನ, ಬಾಯಿ ಮತ್ತು ಗರ್ಭ ಕಂಠದ ಕ್ಯಾನ್ಸರ ಕುರಿತು ಪರೀಕ್ಷೆಯನ್ನು ಈ ಕಾರ್ಯಕ್ರಮದಲ್ಲಿ ಮಾಡಲಾಗುತ್ತದೆ.
ಎಲ್ಲ ಸಾರ್ವಜನಿಕ ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಶಸ್ತ್ರ ಚಿಕಿತ್ಸಾ ಕೊಠಡಿ ಮತ್ತು ಹೇರಿಗೆ ಕೋಣೆಗಳನ್ನು ಸುಸಜ್ಜಿತ ಮತ್ತು ವ್ಯವಸ್ಥಿತವಾಗಿ ಇಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸಾರ್ವಜನಿಕ ಆಸ್ಪತ್ರೆ ರಾಯಬಾಗದಲ್ಲಿ ಶುದ್ದ ನೀರಿನ ಘಟಕವನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು. ಚಿಕ್ಕೋಡಿ ಮತ್ತು ಗೋಕಾಕ ತಾಲೂಕಿನಲ್ಲಿ ‘ಮೇಘಾ ಆರೋಗ್ಯ ಮೇಳಗಳನ್ನು’ ಶೀಘ್ರದಲ್ಲಿ ಆಯೋಜನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಡಾ. ಇಂದೀರಾ ಕಬಾಡೆ, ಉಪನಿರ್ದೇಶಕರು, ಪೌಷ್ಟಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಬೆಂಗಳೂರು ಇವರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌಷ್ಟಿಕ ಆಹಾರ ಪುನಶ್ಚೇತನ ಕೇಂದ್ರಗಳಲ್ಲಿ ಕಡಿಮೆ ತೂಕದ ಮತ್ತು ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು, ಇಂತಹ ಮಕ್ಕಳಿಗೆ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ(ಅಭಿವೃದ್ಧಿ) ಬಸವರಾಜ ಅಡವಿಮಠ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ, ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್ ಎಸ್ ಗಡೇದ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಚಾಂದನಿ ದೇವಡಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಗೀತಾ ಕಾಂಬಳೆ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿಶ್ವನಾಥ ಭೋವಿ, ಜಿಲ್ಲಾ ರೋಗವಾಹಕ ಆಶ್ರೀತರೋಗಗಳ ನಿಯಂತ್ರಣಾ ಅಧಿಕಾರಿ ಡಾ.ವಿವೇಕ ಹೊನ್ನಳ್ಳಿ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಡಾ ಎಸ ಎಸ ಸಾಯನ್ನಾವರ ಹಾಗೂ ತಾಲೂಕಾ ಆರೋಗ್ಯ ಅಧಿಕಾರಿಗಳು ಮತ್ತು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈಧ್ಯಾಧೀಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.