
ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನಲ್ಲಿ ವಿವಿಧೆಡೆ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ರಸ್ತೆಗಳ ಮೇಲೆ ನೀರು ಹರಿಯುತ್ತಿರುವ ಪರಿಣಾಮ ಪ್ರಯಾಣಿಕರ ಪರದಾಟ ಅನುಭವಿಸಿದ್ದಾರೆ.
.ಭಾರಿ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನೂ ಪ್ರತ್ಯೇಕ ಘಟನೆಯಲ್ಲಿ ಎರಡು ತೆಂಗಿನ ಮರಗಳಿಗೆ ಸಿಡಿಲು ಬಡಿದು ತೆಂಗಿನ ಮರಗಳು ಬೆಂಕಿ ಹತ್ತಿ ಉರಿದಿವೆ. ಚಿಕ್ಕೋಡಿ ತಾಲೂಕಿನ ಮಾಂಜರಿ ಹಾಗೂ ಕೇರೂರು ಗ್ರಾಮಗಳಲ್ಲಿ ಸಿಡಿಲನ ಹೊಡೆತಕ್ಕೆ ತೆಂಗಿನ ಮರಗಳಿಗೆ ಬೆಂಕಿ ತಗುಲಿದೆ.