
ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಧರ್ಮಗ್ರಂಥವನ್ನು ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಬೆಳಗಾವಿ ಗ್ರಾಮೀಣ ಠಾಣೆ ಸಿಪಿಐ ಮಂಜುನಾಥ ಹಿರೇಮಠ ಅವರನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಧರ್ಮಗ್ರಂಥವನ್ನು ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ ಮಂಜುನಾಥ ಹಿರೇಮಠ ಅಮಾನತ್ತು ಮಾಡಲಾಗಿದೆ. ಪ್ರಕರಣದಲ್ಲಿ ಇವರು ಕರ್ತವ್ಯ ಲೋಪ ಎಸಗಿದ್ದರು ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅಲ್ಲದೆ ಮುಸ್ಲಿಂ ಸಮಾಜದವರು ಸಿಪಿಐ ಅವರನ್ನು ಅಮಾನತ್ತು ಮಾಡಬೇಕೆಂದು ಆಗ್ರಹಿಸಿದರು.
ಸಂತಿ ಬಸ್ತವಾಡ ಗ್ರಾಮದಲ್ಲಿ ಈದ್ಗಾ ಗೋಪುರ ಧ್ವಂಸ ಪ್ರಕರಣದಲ್ಲಿ ಆರೋಪಿ ಪತ್ತೆ ಹಚ್ಚುವಲ್ಲಿ ನಿರ್ಲಕ್ಷ್ಯ ವಹಿಸಿದ್ದರು ಎಂದರು.
ಸಿಪಿಐ ಅಮಾನತಗೆ ಆಗ್ರಹಿಸಿದ್ದ ಮುಸ್ಲಿಂ ಸಮುದಾಯದ ಜನರು ಇಂದು ಮಧ್ಯಾಹ್ನ 3 ಗಂಟೆಗೆ ರಾಣಿ ಚೆನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.