ದಾವಣಗೆರೆ

ಫಲಾನುಭವಿಗಳ ಸುರಕ್ಷತೆಗೆ ಹೆಚ್ಚಿನ ನಿಗಾ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ.

ಹರಿಹರ (ದಾವಣಗೆರೆ): ಮೇ 20 ರಂದು ಹೊಸಪೇಟೆಯಲ್ಲಿ ನಡೆಯಲಿರುವ ಸರ್ಕಾರದ ಎರಡನೇ ವರ್ಷದ ಸಂಭ್ರಮಾಚರಣೆ ಹಾಗೂ ಹಕ್ಕುಪತ್ರ ವಿತರಣಾ ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳ ಸುರಕ್ಷತೆಗೆ ಹೆಚ್ಚಿನ ಗಮನ ಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹರಿಹರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಚಿವರು, ಆಹಾರ, ಔಷಧೋಪಚಾರ, ಕುಡಿಯುವ ನೀರು ಸೇರಿದಂತೆ ಇನ್ನಿತರ ವ್ಯವಸ್ಥೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು ಎಂದು ತಿಳಿಸಿದರು.

ಫಲಾನುಭವಿಗಳನ್ನು ಮನೆಯ ಸದಸ್ಯರಂತೆ ಕಂಡು ಅವರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮ ಯಶಸ್ಸಿಗೆ ಪ್ರತಿಯೊಬ್ಬ ಅಧಿಕಾರಿಗಳು ಜವಾಬ್ದಾರಿ ತೆಗೆದುಕೊಳ್ಳಬೇಕು. ಹೋಬಳಿ ಮಟ್ಟದಲ್ಲಿ ಅಧಿಕಾರಿಗಳನ್ನು ನಿಯೋಜಿಸಿ, ಫಲಾನುಭವಿಗಳಿಗೆ ನೆರವಾಗಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶಿಸಿದರು.

ಪಕ್ಷಾತೀತವಾಗಿ ಕ್ಷೇತ್ರಗಳ ಅಭಿವೃದ್ಧಿ
ಯಾವುದೇ ರಾಜಕಾರಣ ಮಾಡದೇ ಪಕ್ಷಾತೀತವಾಗಿ ಸಿದ್ದರಾಮಯ್ಯನವರ ಸರ್ಕಾರ ಎಲ್ಲಾ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡುತ್ತಿದೆ. ಬಹಳ ಕಾಳಜಿಯಿಂದ ಹರಿಹರ ಕ್ಷೇತ್ರವನ್ನು ಅಭಿವೃದ್ಧಿ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಹರಿಹರ‌ ಕ್ಷೇತ್ರದ ಶಾಸಕ ಬಿ.ಪಿ.ಹರೀಶ್, ತಹಶಿಲ್ದಾರ್ ಬಸವರಾಜು, ತಾಲೂಕು ಪಂಚಾಯತ್ ಇಒ ಸುಮಲತಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನಂದಗಾವಿ ಶ್ರೀನಿವಾಸ್ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button