Uncategorized

ಜಮೀರ್ ವಿರುದ್ಧ ಅಸಮಾಧಾನ ಹೊರಹಾಕಿದ ಸಿದ್ದು?

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಲ್ಪಸಂಖ್ಯಾತ ವರ್ಗದ ನಾಯಕ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಪರಮಾಪ್ತರಾಗಿದ್ದವರು. ಆದರೆ ಈಗ ದೂರವಾಗಿದ್ದಾರಾ ಎಂಬ ಅನುಮಾನ ಕಾಡುತ್ತಿದೆ. ಸಿದ್ದರಾಮಯ್ಯನವರ ‘ಪರಮಾಪ್ತ’ ಎಂದೇ ಗುರುತಿಸಿಕೊಂಡಿದ್ದ ಜಮೀರ್ ಅಹ್ಮದ್ ಖಾನ್ ವಿರುದ್ಧವೇ ಈಗ ಸಿದ್ದರಾಮಯ್ಯ ಮುನಿಸು ಹೊರಹಾಕಿದ್ದಾರೆ. ‘ಅವನು ನನ್ನ ವಿರುದ್ಧವೇ ದಾವಣಗೆರೆಯಲ್ಲಿ ಕೆಲಸ ಮಾಡಿದ್ದಾನೆ’ ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ.
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಂಪುಟದಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೋರಲು ಅವರ ಬೆಂಬಲಿಗರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಬಂದಿದ್ದರು. ಆದರೆ, ಈ ಸಂದರ್ಭದಲ್ಲಿ ಬೆಂಬಲಿಗರ ಮನವಿ ಆಲಿಸುವ ಬದಲು ಸಿದ್ದರಾಮಯ್ಯನವರು ಅವರ ಮುಂದೆ ಜಮೀರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಸಿಟ್ಟಿನಿಂದ ಬೆಂಬಲಿಗರ ಮುಂದೆ ಗುಡುಗಿದ ಸಿದ್ದರಾಮಯ್ಯ, “ಅವನು ನನ್ನ ಪರಮಾಪ್ತ ಅಂತ ನೀವೆಲ್ಲ ಹೇಳ್ತೀರಾ, ಆದರೆ ಅವನು ಚುನಾವಣೆಯಲ್ಲಿ ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ” ಎಂದು ಗರಂ ಆಗಿ ಹೇಳಿದ್ದಾರೆ. ಅದಕ್ಕೆ ಬೆಂಬಲಿಗರು ಸಮಜಾಯಿಷಿ ನೀಡಲು ನೋಡಿದ್ದಾರೆ.
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಜಮೀರ್ ಅಹ್ಮದ್ ಖಾನ್ ಅವರು ವಸತಿ ಸಚಿವರಾಗಿ ಪ್ರಭಾವಿ ಖಾತೆಯನ್ನು ನಿಭಾಯಿಸಿದ್ದರು. ಸಿದ್ದರಾಮಯ್ಯನವರು ಹೋದಲ್ಲೆಲ್ಲಾ ಜಮೀರ್ ಇರುತ್ತಿದ್ದರು. ಈಗಿನ ರಾಜಕೀಯ ಪರಿಸ್ಥಿತಿಯಲ್ಲಿ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ ಪಡೆಯಲು ಜಮೀರ್ ಹರಸಾಹಸ ಪಡುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button