ಬಿಜಾಪುರರಾಜ್ಯ

ಅಟ್ಟಹಾಸ ಮೆರೆದ ಜವರಾಯ: ಸರಣಿ ಅಪಘಾತದಲ್ಲಿ 6 ಜನರ ದುರ್ಮರಣ

ಗುರುವಾರ ಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೆಳ್ಳಂಬೆಳಗ್ಗೆ ನಡೆದ ಸರಣಿ ರಸ್ತೆ ಅಪಘಾತದಲ್ಲಿ 6 ಜನರು ಮೃತರಾಗಿದ್ದಾರೆ. ಡಿವೈಡರ್ ಗೆ ಡಿಕ್ಕಿಯಾದ ಸ್ಕಾರ್ಪಿಯೋ ಖಾಸಗಿ‌ ಬಸ್ ಹಾಗೂ ಲಾರಿಗೆ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಆರು ಜನರು ಸ್ಥಳದಲ್ಲಿಯೇ ಮೃತರಾಗಿದ್ದು ಅದೃಷ್ಟವಶಾತ್ 10 ವರ್ಷದ ಬಾಲಕ ಸಾವಿನಿಂದ ಪಾರಾಗಿದ್ದಾನೆ.‌ಈ ಕುರಿತು ಇಲ್ಲಿದೆ ಡಿಟೇಲ್ಸ್…
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಜವರಾಯ ಅಟ್ಡಹಾಸ ಮೆರೆದಿದ್ದಾನೆ. ಮಹಿಂದ್ರಾ ಸ್ಕಾರ್ಪಿಯೋ, ಕಂಟೇನರ್ ಹಾಗೂ ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದುರ್ಘಟನೆ ನಡೆದಿದೆ‌. ಭೀಕರ ಅಪಘಾತದ ಪರಿಣಾಮ ಕಾರಿನಲ್ಲಿದ್ದ ಐವರು ಹಾಗೂ ಖಾಸಗಿ ಬಸ್‌ನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಇತರರಿಗೆ ಗಾಯಗಳಾಗಿವೆ. ಲಾರಿ ಚಾಲಕನಿಗೂ ಗಾಯಗಳಾಗಿವೆ.
ಮನಗೂಳಿ ಬಳಿ ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್ಎಚ್– 50) ಬುಧವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಂದ್ರಾ ಸ್ಕಾರ್ಪಿಯೋದಲ್ಲಿ ಇದ್ದ ತೆಲಂಗಾಣದ ಗಡವಾಲದ ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಹಾಗೂ ಅವರ ಪತ್ನಿ ಪವಿತ್ರಾ, ಮಗಳು ಜೋಸ್ನಾ, ಮಹೀಂದ್ರಾ ಸ್ಕಾರ್ಪಿಯೋ ಚಾಲಕ ವಿಜಯಪುರ ಜಿಲ್ಲೆಯ ಹೊರ್ತಿಯ ವಿಕಾಸ ಶಿವಪ್ಪ ಮಕನಿ ಹಾಗೂ ವಿಆರ್‌ಎಲ್ ಬಸ್ ಚಾಲಕ ಕಲಗುಟಗಿ ತಾಂಡಾದ ಬಸವರಾಜ ರಾಠೋಡ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಭಾಸ್ಕರನ್ ಅವರ ಪುತ್ರ ಪ್ರವೀಣತೇಜ ಹಾಗೂ ಲಾರಿ ಚಾಲಕ ಹುಲಜಂತಿಯ ಚನ್ನಬಸು ಸಿದ್ದಪ್ಪ ಮಾಳಿ ಗಾಯಗೊಂಡಿದ್ದು, ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಾರಾಷ್ಟ್ರದ ನೋಂದಣಿ (ಎಂ.ಎಚ್.13 ಬಿಎನ್ 8364) ಇರುವ ಮಹೀಂದ್ರಾ ಸ್ಕಾರ್ಪಿಯೋ ಮತ್ತು ವಿಆರ್‌ಎಲ್ ಬಸ್ (ಎಂ.ಎಚ್.12 ವಿಟಿ 7982) ಹಾಗೂ ಲಾರಿ (ಕೆಎ 22 ಎಎ 3117) ನಡುವೆ ಸರಣಿ ಅಪಘಾತ ಸಂಭವಿಸಿದೆ. ಸೋಲಾಪುರದತ್ತ ತೆರಳುತ್ತಿದ್ದ ಮಹೀಂದ್ರಾ ಸ್ಕಾರ್ಪಿಯೋ ಆರಂಭದಲ್ಲಿ ಹೆದ್ದಾರಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಹಾರಿ, ಮುಂಬೈನಿಂದ ಬಳ್ಳಾರಿಗೆ ತೆರಳುತ್ತಿದ್ದ ವಿಆರ್‌ಎಲ್ ಬಸ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಇದೇ ಮಾರ್ಗದಲ್ಲಿ ಬರುತ್ತಿದ್ದ ಲಾರಿಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕಾರ್ಪಿಯೋದಲ್ಲಿದ್ದ ಐವರು ಹಾಗೂ ಬಸ್ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನೂ ಹೆದ್ದಾರಿಯಲ್ಲಿ ಅಪಘಾತದಿಂದ ಉಂಟಾಗಿದ್ದ ಪೊಲೀಸರು ಟ್ರಾಫಿಕ್ ಜಾಮ್ ಕ್ಲೀಯರ್ ಮಾಡಿಸಿದರು.
ಬೆಳ್ಳಂಬೆಳಗ್ಗೆ ನಡೆದ ಅಪಘಾತದಲ್ಲಿ 6 ಜನರು ಮೃತಪಟ್ಟಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವಾಗ ವೇಗ ಹಾಗೂ ವಾಹನದ ಮೇಲೆ ನಿಯಂತ್ರಣ ವಿರದೇ ಹೋದಲ್ಲಿ ಇಂತಹ ಭೀಕರ ಅಫಘಾತಗಳು ಸಂಭವಿಸುತ್ತವೆ. ವಾಹನ ಚಲಾಯಿಸುವಾಗ ಜಾಗೃತೆ ವಹಿಸುವುದು ಅಗತ್ಯವಾಗಿದೆ.

Related Articles

Leave a Reply

Your email address will not be published. Required fields are marked *

Back to top button