
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯನ್ನು ರಾಜಧಾನಿ ಬೆಂಗಳೂರಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಲಯದಲ್ಲಿ ಆಯೋಜಿಸಲಾಗಿತ್ತು.
ಸಿಎಂ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ರಾಜ್ಯಾಧ್ಯಕ್ಷ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವಾರ್ಪಣೆ ಮಾಡಿದರು. ನಂತರ ಭಯೋತ್ಪಾದ ನಿರ್ಮೂಲನೆಗಾಗಿ ಪ್ರಮಾಣವಚನವನ್ನು ಸ್ವೀಕರಿಸಲಾಯಿತು.
ಈ ವೇಳೆ ಕೆಪಿಸಿಸಿ ರಾಜ್ಯಾಧ್ಯಕ್ಷ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ ಅವರು ರಾಜೀವ್ ಗಾಂಧಿ ಅವರ ನಿಧನದಿಂದ ದೇಶಕ್ಕೆ ತುಂಬ ನಷ್ಟವಾಗಿದೆ. ಜಿಲ್ಲಾ ಮತ್ತು ತಾಲೂಕಾ ಪಂಚಾಯಿತಿಯಲ್ಲಿ ಹೆಣ್ಣು ಮಕ್ಕಳಿಗೆ ಶೇ. 50 ರಷ್ಟು ಮೀಸಲಾತಿ ನೀಡಿದ್ದು, ರಾಜೀವ್ ಗಾಂಧಿ ಅವರ ಚಿಂತನೆ ಎಂದು ಹೇಳುತ್ತ, ರಾಜೀವ್ ಗಾಂಧಿ ಅವರೊಂದಿಗಿನ ಒಡನಾಟವನ್ನು ನೆನೆನದರು.
ಕೆ.ಜೆ. ಜಾರ್ಜ್, ವೀರಪ್ಪ ಮೊಯ್ಲಿ, ಬಿ.ಕೆ ಹರಿಪ್ರಸಾದ, ಸಲೀಂ ಅಹಮದ್, ನಝೀರ್ ಅಹ್ಮದ್ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.