
ಕರ್ನಾಟಕ ರಾಜ್ಯದ ಗೃಹ ಸಚಿವ ಡಾ”ಜಿ.ಪರಮೇಶ್ವರ್ ಶಿಕ್ಷಣ ಸಂಸ್ಥೆಗಳ ವಿರುದ್ಧ ಕೇಂದ್ರ ಬಿಜೆಪಿ ಸರ್ಕಾರ ಇಡಿ ದಾಳಿ ಮಾಡಿಸಿ ಭಯದ ವಾತಾವರಣ ನಿರ್ಮಿಸಲ ಹೊರಟಿದೆಯೆ ಎಂಬ ಅನುಮಾನ ಶುರುವಾಗಿದೆ.
ಸುಮಾರು ಒಂಬತ್ತು ಕಾರುಗಳಲ್ಲಿ ಬಂದ ಇಡಿ ಅಧಿಕಾರಿ ಗಳು , ತುಮಕೂರಿನ ಹೆಗ್ಗೆರೆಯಲ್ಲಿರುವ ಡಾ” ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಮೆಡಿಕಲ್ ಕಾಲೇಜು ಹಾಗೂ ಮರಳೂರು ದಿನ್ನೆಯ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು ಹಾಗೂ ಬೆಂಗಳೂರು ಗ್ರಾಮಾಂತರದ ನೆಲಮಂಗಲದ ಬಳಿಯಿರುವ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಮಾಡಿ , ಶಿಕ್ಷಣ ಸಂಸ್ಥೆಗಳ ಕಚೇರಿಗಳು ಹಾಗೂ ಪ್ರಾಂಶುಪಾಲರ ಕೊಠಡಿ ಗಳಲ್ಲಿರುವ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
ಈ ಹಿಂದೆಯೂ 2019 ರಲ್ಲಿಯೂ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಮಾಡಿತ್ತು.
ಈ ಸಂದರ್ಭದಲ್ಲಿ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದರು.
ಗುರುವಾರವೂ ಸಹ ದಾಖಲೆಗಳ ಶೋಧ ಕಾರ್ಯ ಮುಂದುವರೆಸಿದ್ದ ಕೇಂದ್ರ ಜಾರಿ ನಿರ್ದೇಶನಾಲಯ.
ಇದರ ಬಗ್ಗೆ ರಾಜ್ಯದ ಗೃಹ ಸಚಿವರಾದ ಡಾ”ಜಿ.ಪರಮೇಶ್ವರ್ ರವರು ಮಾಧ್ಯಮ ದವರೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ.