
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಂದ ಸ್ವ-ಸಹಾಯ/ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ ಕುರಿತು ಬೆಂಗಳೂರಿನ ವಿಧಾನ ಸೌಧದ ಕಚೇರಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ಅವರ ಉಪಸ್ಥಿತಿಯಲ್ಲಿ ಸಭೆ ನಡೆಸಲಾಯಿತು.
ಗೃಹಲಕ್ಷ್ಮಿ ಯೋಜನೆಯಡಿ 1.25 ಕೋಟಿ ಫಲಾನುಭವಿಗಳಿದ್ದು, ಪ್ರತಿ ತಿಂಗಳು ಸಂದಾಯವಾಗುತ್ತಿರುವ ₹ 2000/- ಮೊತ್ತವನ್ನು ಮತ್ತಷ್ಟು ಸಮರ್ಪಕವಾಗಿ ಉಪಯೋಗಿಸಿಕೊಳ್ಳುವ ನಿಟ್ಟಿನಲ್ಲಿ ಸ್ವ-ಸಹಾಯ/ ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸಲು ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಈ ಮೂಲಕ ಗೃಹಲಕ್ಷ್ಮಿ ಯೋಜನೆಯ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಬಲಪಡಿಸುವುದು ಈ ಗುಂಪುಗಳ ಪ್ರಮುಖ ಉದ್ದೇಶ.
ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿಗಳಾದ ಡಾ.ಶಾಮ್ಲಾ ಇಕ್ಬಾಲ್, ಕೌಶಲ್ಯ ಅಭಿವೃದ್ಧಿ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀವಿದ್ಯಾ, ಸಿಟಿಜನ್ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ (EDCS), ಸಿಬ್ಬಂದಿ ಇಲಾಖೆ ಮತ್ತು ಆಡಳಿತಾತ್ಮಕ ಸುಧಾರಣೆಗಳು (ಇ-ಆಡಳಿತ) ಕೇಂದ್ರದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ದಿಲೀಶ್ ಸಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಟಿ. ರಾಘವೇಂದ್ರ, ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ವಿಶೇಷ ಕರ್ತವ್ಯಾಧಿಕಾರಿ ಹಾಗೂ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಎಚ್.ನಿಶ್ಚಲ್, ಇಲಾಖೆಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.