
ಬಾಗಲಕೋಟೆ: ನಿರಂತರ ಮಳೆ ಹಿನ್ನಲೆ ನೇಕಾರನ ಮನೆ ಕುಸಿತಗೊಂಡ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಗ್ರಾಮದಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರವಾಗಿ ಭಾರಿ ಮಳೆ ಸುರಿಯುತ್ತಿದೆ. ಈ ಹಿನ್ನಲೆ ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಗ್ರಾಮದ ಕುಂಬಾರ ಓಣಿಯಲ್ಲಿರುವ ಶ್ರೀಶೈಲ್ ಬುರ್ಲಿ ಎಂಬ ಕಾರಣ ಮನೆ ಕುಸಿತಗೊಂಡಿದೆ. ಇದರಿಂದಾಗಿ ಮನೆಯಲ್ಲಿನ ವಸ್ತುಗಳಿಗೆ ಹಾನಿ ಉಂಟಾಗಿದೆ. ಅದೆಷ್ಟವಶಾತ್ ಮನೆಯಲ್ಲಿದ್ದ ಜನರಿಗೆ ಯಾವುದೇ ಪ್ರಾಣಪಾಯವಾಗಿಲ್ಲ. ಕುಂಬಾರ್ ಕುಟುಂಬವು ಸೂಕ್ತ ಪರಿಹಾರಕ್ಕೆ ಸರ್ಕಾರವನ್ನ ಆಗ್ರಹಿಸಿದೆ.