
ಅಥಣಿ : ಮನೆ ಮುಂದಿನ ಗೇಟ್ ತೆರೆಯುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಫ್ರೌಡ ಶಾಲೆ ಶಿಕ್ಷಕ ಮೃತಪಟ್ಟ ಘಟನೆ ಅಥಣಿ ಪಟ್ಟಣದ ಸತ್ಯ ಪ್ರಮೋದ್ ನಗರದಲ್ಲಿ ನಡೆದಿದೆ.
ಪ್ರವೀಣಕುಮಾರ ಜಿ ಕಡಪಟ್ಟಿಮಠ (41) ಮೃ#/ತ ದುರ್ದೈವಿ. ವಿವಾಹ ವಾರ್ಷಿಕೋತ್ಸವ ಹಿನ್ನಲೆಯಲ್ಲಿ ಪ್ರವಾಸ ಮುಗಿಸಿ ವಾಪಸ್ ಮನೆಗೆ ತೆರಳಿದ ಸಂದರ್ಭದಲ್ಲಿ ಗೇಟ್ ತಗೆಯಲು ಹೋದಾಗ ವಿದ್ಯುತ್ ತಗುಲಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೂಲತಃ ತೇರದಾಳ ಗ್ರಾಮದವರಾದ ಇವರು, ಅಥಣಿ ತಾಲೂಕಿನ ಸತ್ತಿ ಗ್ರಾಮದ ಸರಕಾರಿ ಫೌಡ ಶಾಲೆಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರವೀಣಕುಮಾರ್ ಕುಟುಂಬ ನಿನ್ನೆಯಷ್ಟೇ ವಿವಾಹ ಮಹೋತ್ಸವ ಆಚರಿಸಿಕೊಂಡಿದ್ದರು.
ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.