
ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರ ಮಳೆಗೆ ಮನೆಯ ಗೋಡೆ ಕುಸಿದು ಮೂರು ವರ್ಷದ ಮಗು ಮೃತಪಟ್ಟ ಘಟನೆ ಹೃದಯವಿದ್ರಾವಕ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಮಹಾಲಿಂಗೇಶ್ವರ ಕಾಲನಿಯಲ್ಲಿ ನಡೆದಿದೆ.
ಕೀರ್ತಿಕಾ ನಾಗೇಶ್ ಪೂಜಾರಿ (3) ಮೃತ ದುರ್ದೈವಿ ಮನೆಯ ಹಿಂಬದಿಯ ಗೋಡೆ ಕುಸಿದು ಮಗವಿನ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ ಸಾವು. ಮತ್ತೋರ್ವ ನಾಲ್ಕು ವರ್ಷದ ಬಾಲಕಿಗೆ ಗಾಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದೇ ರೂಮ್’ನಲ್ಲಿ ಮಲಗಿದ್ದ ಅಕ್ಕತಂಗಿ. ಮತ್ತೊಂದು ರೂಮ್’ನಲ್ಲಿ ಮಲಗಿದ್ದ ತಂದೆ ತಾಯಿ ಬೆಳಗಿನ ಜಾವ ಕುಸಿದು ಬಿದ್ದ ಮನೆಯ ಒಂದು ಭಾಗದ ಗೋಡೆ ಕುಸಿದಿದೆ. ಸ್ಥಳಕ್ಕೆ ಗೋಕಾಕ್ ಶಹರ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬಾಲಕಿ ಶವ ಗೋಕಾಕ್ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಶಿಪ್ಟ್ ಮಾಡಲಾಗಿದೆ.ಗೋಕಾಕ್ ಶಹರ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.