
ಬೆಂಗಳೂರಿನಲ್ಲಿ ನಡೆಯಲಿರುವ ಜೈ ಜವಾನ್ ಜೈ ಹಿಂದ್ ಕಾರ್ಯಕ್ರಮಕ್ಕಾಗಿ ಬೆಳಗಾವಿಯಿಂದ ಮಾಜಿ ಸೈನಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಜೈ ಜವಾನ್ ಜೈ ಹಿಂದ್ ಕಾರ್ಯಕ್ರಮಕ್ಕಾಗಿ ಇಂದು ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಮಾಜಿ ಸೈನಿಕರ ಘಟಕ , ಜೈ ಹಿಂದ್ ಸಭಾದ ಪದಾಧಿಕಾರಿಗಳು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಬೆಳಗಾವಿಯ ಕಾಂಗ್ರೆಸ್ ಭವನದ ಎದುರು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿನಯ್ ನಾವಲಗಟ್ಟಿ ಅವರು ಹಸಿರು ನಿಶಾನೆ ತೋರಿಸಿ ಬಸ್ಸಿಗೆ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಪ್ರದೀಪ್ ಎಂ.ಜೆ., ಸಯ್ಯದ ಮನ್ಸೂರ್, ಮಲಗೌಡಾ ಪಾಟೀಲ್, ಬಸವರಾಜ್ ಶೇಗಾಂವಿ, ಸಿದ್ಧಿಕ್ ಅಂಕಲಗಿ ಸೇರಿದಂತೆ ಮಾಜಿ ಸೈನಿಕರು ಇನ್ನುಳಿದವರು ಭಾಗಿಯಾಗಿದ್ಧರು.