Uncategorized

ಸವದತ್ತಿ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಪ್ರಗತಿ ಪರಿಶೀಲನೆ ಸಭೆ!

ಸವದತ್ತಿ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಇಂದು ನನ್ನ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿ, ಕ್ಷೇತ್ರದ ಪ್ರಗತಿ ಕಾರ್ಯಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.

ಕ್ಷೇತ್ರದಾದ್ಯಂತ ಅನುಷ್ಠಾನಗೊಳ್ಳುತ್ತಿರುವ ವಿವಿಧ ಜನಪರ ಯೋಜನೆಗಳು, ಕುಡಿಯುವ ನೀರು, ರಸ್ತೆ ಮೂಲಸೌಕರ್ಯ, ಕೃಷಿ ಹಾಗೂ ಸಾರ್ವಜನಿಕ ಇಲಾಖೆಗಳ ಪ್ರಸ್ತುತ ಪ್ರಗತಿಯ ಸ್ಥಿತಿಗತಿಗಳ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದು, ಬಾಕಿ ಇರುವ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದಿಂದ ಪೂರ್ಣಗೊಳಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಸರ್ಕಾರದ ಸೌಲಭ್ಯಗಳು ತಳಮಟ್ಟದ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಪ್ರಾಮಾಣಿಕವಾಗಿ ತಲುಪಬೇಕು ಎನ್ನುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button