ಎಸ್ಸೆಸ್ಸೆಲ್ಸಿಯಲ್ಲಿ ಶೇ. 60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಯ ಡಿಡಿಪಿಐಗಳಿಗೆ ನೋಟಿಸ್… ಸಭೆಗೆ ತಡವಾಗಿ ಬಾರದ ಅಧಿಕಾರಿಗಳ ವಿರುದ್ಧ ಸಿಎಂ ಗರಂ…

ಎಸ್ಸೆಸ್ಸೆಲ್ಸಿಯಲ್ಲಿ ಶೇ. 60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಯ ಡಿಡಿಪಿಐಗಳಿಗೆ ನೋಟಿಸ್…
ಸಭೆಗೆ ತಡವಾಗಿ ಬಾರದ ಅಧಿಕಾರಿಗಳ ವಿರುದ್ಧ ಸಿಎಂ ಗರಂ…
ಎಸೆಸೆಲ್ಸಿಯಲ್ಲಿ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಬೇಕು, ನೋಟಿಸ್ಗೆ ಕೊಟ್ಟ ಉತ್ತರ ಸಮರ್ಪಕ ಅನ್ನಿಸದಿದ್ದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದರು.
ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆಗಿನ ಎರಡನೇ ದಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah), ಶನಿವಾರ ಡಿಸಿಎಂ ಮತ್ತು ಸಚಿವರ ಮೇಲೆ ಗರಂ ಆದರು.
ಇದು ಮುಖ್ಯವಾದ ಮೀಟಿಂಗ್ ಅಲ್ವಾ? ಎಲ್ಲರೂ ಸರಿಯಾದ ಸಮಯಕ್ಕೆ ಬರಬೇಕು. ಸಭೆಗೆ ಬಾರದೇ ಹೋದ್ರೆ ಹೇಗೆ? ಎಂದು ಪ್ರಶ್ನಿಸಿದರು. ಇನ್ನು ಸಿಎಂ, ಪಕ್ಕದಲ್ಲೇ ಇದ್ದ ಖಾಲಿ ಕುರ್ಚಿಯ ಕಡೆ ಕೈ ತೋರಿಸಿ, ನಮ್ಮ ಡಿಸಿಎಂ ಅವರು ಇನ್ನೂ ಸಭೆಗೆ ಬಂದಿಲ್ಲ ಎಂದು ಡಿ.ಕೆ ಶಿವಕುಮಾರ್ ಮೇಲೆ ಅಸಮಾಧಾನ ಹೊರ ಹಾಕಿದರು.
ನಂತರ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ, ಎಸೆಸೆಲ್ಸಿಯಲ್ಲಿ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ ಕೊರತೆ, ಸಿಬ್ಬಂದಿ ಕೊರತೆ ಎನ್ನುವ ನೆಪ ನೆಪ ಹೇಳಬೇಡಿ. ದಕ್ಷಿಣ ಕನ್ನಡ ಮತ್ತು ಇತರೆ ಜಿಲ್ಲೆಗಳಲ್ಲಿ ಮಾತ್ರ ಉತ್ತಮ ಫಲಿತಾಂಶ ಬರುತ್ತಿದೆ ಶಿಕ್ಷಕರು ಮತ್ತು ಡಿಡಿಪಿಐಗಳು ಆಸಕ್ತಿಯಿಂದ ಕೆಲಸ ಮಾಡಿದರೆ, ಉತ್ತಮ ಫಲಿತಾಂಶ ಎಲ್ಲಾ ಕಡೆ ಬರುತ್ತದೆ. ಎಸೆಸೆಲ್ಸಿಯಲ್ಲಿ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಬೇಕು, ನೋಟಿಸ್ಗೆ ಕೊಟ್ಟ ಉತ್ತರ ಸಮರ್ಪಕ ಅನ್ನಿಸದಿದ್ದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.