Uncategorized

ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಚುನಾವಣೆಯಲ್ಲಿ ಬೆಳಗಾವಿಯ ಹಿರಿಯ ವಕೀಲರಾದ ಐ.ಎಂ. ಪಾಟೀಲ್ ಅವರು ಭರ್ಜರಿ ಜಯ ದಾಖಲಿಸಿದ್ದಾರೆ.

ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಚುನಾವಣೆಯಲ್ಲಿ ಬೆಳಗಾವಿಯ ಹಿರಿಯ ವಕೀಲರಾದ ಐ.ಎಂ. ಪಾಟೀಲ್ ಅವರು ಭರ್ಜರಿ ಜಯ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ವಕೀಲರ ಸಮುದಾಯದಿಂದ ಸಡಗರ-ಸಂಭ್ರಮದ ವಿಜಯೋತ್ಸವ ನಡೆದಿದೆ.
ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಚುನಾವಣೆಯಲ್ಲಿ ಬೆಳಗಾವಿಯ ಐ.ಎಂ. ಪಾಟೀಲ್ ಅವರು ಅತ್ಯಧಿಕ ಮತಗಳ ಅಂತರದಿಂದ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸೋಮವಾರ ನಗರದಲ್ಲಿ ಅದ್ಧೂರಿ ಸಂಭ್ರಮಾಚರಣೆ ನಡೆಯಿತು. ಬೆಳಗಾವಿ ಬಾರ್ ಅಸೋಸಿಯೇಷನ್ ಸದಸ್ಯರು ನಗರದ ಹೃದಯಭಾಗವಾದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿರುವ ಗಣೇಶ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಐ.ಎಂ. ಪಾಟೀಲ್ ಅವರ ಗೆಲುವಿಗೆ ಹರ್ಷ ವ್ಯಕ್ತಪಡಿಸಿದರು. ಬಳಿಕ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು. ಇದೇ ಸಂದರ್ಭದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ವಕೀಲರ ಒಕ್ಕೂಟ, ಐ.ಎಂ. ಪಾಟೀಲ್ ಅವರ ಆಯ್ಕೆಯಿಂದ ಬೆಳಗಾವಿ ಜಿಲ್ಲೆಯ ಹಾಗೂ ಇಡೀ ರಾಜ್ಯದ ವಕೀಲರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯಲಿದೆ ಎಂಬ ದೃಢ ವಿಶ್ವಾಸ ವ್ಯಕ್ತಪಡಿಸಿತು. (ಫ್ಲೋ)
ತಮ್ಮ ಅದ್ಭುತ ಗೆಲುವಿನ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನೂತನ ಸದಸ್ಯ ಐ.ಎಂ. ಪಾಟೀಲ್ ಅವರು, “ಮಾರ್ಚ್ 11 ರಂದು ಜರುಗಿದ ವಕೀಲರ ಪರಿಷತ್ ಚುನಾವಣೆಯಲ್ಲಿ ಬೆಳಗಾವಿ ನಗರ, ಜಿಲ್ಲೆ ಸೇರಿದಂತೆ ಇಡೀ ಕರ್ನಾಟಕದ ವಕೀಲ ಮಿತ್ರರು ನನಗೆ ಅಭೂತಪೂರ್ವ ಬೆಂಬಲ ನೀಡಿ ಜಯಶಾಲಿಯಾಗಿಸಿದ್ದಾರೆ. ಇಡೀ ವಕೀಲರ ಸಮುದಾಯಕ್ಕೆ ನಾನು ಸದಾ ಚಿರಋಣಿಯಾಗಿದ್ದು, ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ವಕೀಲ ಸಮುದಾಯದ ಸೇವೆ ಮಾಡಲು ಸಿಕ್ಕಿರುವ ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ವಕೀಲರ ಕುಂದು-ಕೊರತೆಗಳ ನಿವಾರಣೆಗೆ ಹಾಗೂ ಇಡೀ ರಾಜ್ಯದ ವಕೀಲರ ಶ್ರೇಯೋಭಿವೃದ್ಧಿಗೆ ನಾನು ಕಟಿಬದ್ಧನಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಬಾರ್ ಅಸೋಸಿಯೇಷನ್‌ನ ಪ್ರಮುಖ ಪದಾಧಿಕಾರಿಗಳು ಹಾಗೂ ನೂರಾರು ವಕೀಲರು ಪಾಲ್ಗೊಂಡು ಪರಸ್ಪರ ಅಭಿನಂದನೆಗಳನ್ನು ವಿನಿಮಯ ಮಾಡಿಕೊಂಡರು

Related Articles

Leave a Reply

Your email address will not be published. Required fields are marked *

Back to top button