Uncategorized
ಸಾಂಬಾರ್ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ: ಪತ್ನಿ ಸಾವಿನಲ್ಲಿ ಅಂತ್ಯ,

ದೇವನಹಳ್ಳಿ, ಮೇ 31: ಸಾಂಬಾರ್ ವಿಚಾರಕ್ಕೆ ದಂಪತಿ ನಡುವೆ ಉಂಟಾದ ಕಲಹ ಪತ್ನಿ ಸಾವಿನಲ್ಲಿ ಅಂತ್ಯವಾಗಿರುವಂತಹ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಾಗರತ್ನ (38) ಸಾವನ್ನಪಿದ ಗೃಹಿಣಿ. ಮನೆಯಲ್ಲಿ ನೇಣಿ ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಆಗಿದೆ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನು ಮಗಳದ್ದು ಆತ್ಮಹತ್ಯೆಯಲ್ಲ, ಕೊಲೆ ಅಂತ ಮಹಿಳೆಯ ತವರು ಮನೆಯವರ ಆರೋಪ ಮಾಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಗಂಡ ಕೊಲೆ ಮಾಡಿದ್ದಾನೆ
ಅಂತ ಮೃತಳ ಅಣ್ಣ ಮತ್ತು ತಾಯಿ ಆರೋಪಿಸಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ಸಾಂಬಾರ್ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತ ಗಂಡ ಮತ್ತು ಮಕ್ಕಳು ಹೇಳುತ್ತಿದ್ದಾರೆ