
ಬೆಳಗಾವಿ: 18 ವರ್ಷದ ಬಳಿಕ ಆರ್ ಸಿ.ಬಿ ಐಪಿಎಲ್ ಕಪ್ ಗೆದ್ದ ಹಿನ್ನೆಲೆ ಸಂಭ್ರಮಾಚರಣೆ ವೇಳೆ ಅಭಿಮಾನಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ.
ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ಮಂಜುನಾಥ ಕಂಬಾರ ಹೃದಯಾಘಾತದಿಂದ ಸಾವನ್ನಪ್ಪಿದ ಅಭಿಮಾನಿಯಾಗಿದ್ದಾನೆ. ಆರ್ ಸಿ.ಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಹೃದಯಾಘಾತದಿಂದಾಗಿ ಸ್ಥಳದಲ್ಲೇ ಸಾವಪ್ಪಿದ್ದಾನೆ. ಕುಲಗೋಡ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.