ಬೆಂಗಳೂರು
ಈ ಬಾರಿ ನೋ ಪಿಓಪಿ…ಓನ್ಲಿ ಇಕೋ ಫ್ರೆಂಡ್ಲಿ ಗಣೇಶ ಮೂರ್ತಿಗಳನ್ನೇ ಬಳಸಿ…

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರಿನ ಸೂಚನೆಯನ್ವಯ ಬೆಳಗಾವಿಯಲ್ಲಿ ಈ ಬಾರಿ ಪಿಓಪಿ ಮತ್ತು ಪರಿಸರಕ್ಕೆ ಹಾನಿಕರವಾದ ಬಣ್ಣಗಳನ್ನು ಬಳಸಿ ತಯಾರಿಸಿದ ಗಣೇಶ ಮೂರ್ತಿಗಳ ಬಳಕೆಗೆ ನಿರ್ಬಂಧವನ್ನು ಹೇರಲಾಗಿದ್ದು, ನಿಯಮ ಉಲ್ಲಂಘಿಸಿದರೇ ಕ್ರಮ ಕೈಗೊಳ್ಳುವುದಾಗಿ ಬೆಳಗಾವಿ ಮಹಾನಗರ ಪಾಲಿಕೆಯೂ ಎಚ್ಚರಿಕೆಯನ್ನು ನೀಡಿದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರಿನ ಸೂಚನೆಯನ್ವಯ ಪಿ.ಓ.ಪಿ.ಯಿಂದ ತಯಾರಿಸಲಾದ ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಸುವುದು ಮತ್ತು ಜಲಮೂಲಗಳಲ್ಲಿ ನದಿ, ಕಾಲುವೆ/ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿರ್ಬಂಧಿಸಲಾಗಿದೆ.
ಆದ್ದರಿಂದ ಈ ಬಾರಿಯ ಗಣೇಶೋತ್ಸವದಲ್ಲಿ ಮೂರ್ತಿ ತಯಾರಕರು, ಸಾರ್ವಜನಿಕರು ಮತ್ತು ಗಣೇಶೋತ್ಸವ ಮಹಾಮಂಡಳಗಳಿಗೆ ಬೆಳಗಾವಿ ಮಹಾನಗರ ಪಾಲಿಕೆಯೂ ಮನವಿಯನ್ನು ಮಾಡಿಕೊಂಡಿದೆ.
ಒಂದು ವೇಳೆ ನಿಯಮ ಉಲ್ಲಂಘನೆಯಾದರೇ, ಪಿಓಪಿ ಮೂರ್ತಿಗಳನ್ನು ಜಪ್ತಿ ಮಾಡಿ ಕ್ರಮಕೈಗೊಳ್ಳಲಾಗುವುದೆಂದು ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರು ಆದೇಶವನ್ನು ಹೊರಡಿಸಿದ್ದಾರೆ.