ಹುಬ್ಬಳ್ಳಿ

ಹುಬ್ಬಳ್ಳಿ-ರಾಮೇಶ್ವರಂ ಸಾಪ್ತಾಹಿಕ ವಿಶೇಷ ರೈಲು ಸೇವೆ ವಿಸ್ತರಣೆ.

 

ಹುಬ್ಬಳ್ಳಿ,: ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ರಾಮೇಶ್ವರಂ ರೈಲು ನಿಲ್ದಾಣಗಳ ಮಧ್ಯೆ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಅವಧಿ ವಿಸ್ತರಿಸಲು ರೈಲ್ವೆ ಮಂಡಳಿಯು ಅನುಮೋದನೆ ನೀಡಿದೆ. ಪ್ರಯಾಣಿಕರು ಗಮನಿಸಬೇಕಾದ ಅವಧಿ ವಿಸ್ತರಿಸಿದ ರೈಲುಗಳ ವಿವರಗಳು ಈ ಕೆಳಗಿನಂತಿವೆ.

ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ-ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 4 ರಿಂದ ಜೂನ್ 28, 2025 ರವರೆಗೆ ತನ್ನ ಸೇವೆ ಮುಂದುವರಿಸಲಿದೆ. ಈ ಮೊದಲು ಡಿಸೆಂಬರ್ 28, 2024 ರವರೆಗೆ ಓಡಿಸಲು ಸೂಚಿಸಲಾಗಿತ್ತು.

ರೈಲು ಸಂಖ್ಯೆ 07356 ರಾಮೇಶ್ವರಂ-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 5 ರಿಂದ ಜೂನ್ 29, 2025 ರವರೆಗೆ ತನ್ನ ಸೇವೆ ಮುಂದುವರಿಸಲಿದೆ. ಈ ಮೊದಲು ಡಿಸೆಂಬರ್ 29, 2024 ರವರೆಗೆ ಓಡಿಸಲು ಸೂಚಿಸಲಾಗಿತ್ತು.

ಮಧುರೈ ವಿಭಾಗದ ವ್ಯಾಪ್ತಿಯಲ್ಲಿ ಬರುವ ಶಿವಗಂಗಾ ನಿಲ್ದಾಣದಲ್ಲಿ ಈ ರೈಲುಗಳಿಗೆ ಹೆಚ್ಚುವರಿ ನಿಲುಗಡೆಯನ್ನು ಒದಗಿಸಲಾಗಿದೆ.

ಜನವರಿ 4, 2025 ರಿಂದ ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ-ರಾಮೇಶ್ವರಂ ಮತ್ತು ಜನವರಿ 5, 2025 ರಿಂದ ರೈಲು ಸಂಖ್ಯೆ 07356 ರಾಮೇಶ್ವರಂ- ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸಕೃಪೆರೈಲುಗಳ ಪರಿಷ್ಕೃತ ಸಮಯ ಜಾರಿಗೆ ಬರಲಿದೆ.

https://kannada.oneindia.com/travel/hubballi-rameswaram-weekly-express-train-service-extended-until-june-2025-392089.html

ಕೃಪೆ ಅಂತರಜಾಲ

Related Articles

Leave a Reply

Your email address will not be published. Required fields are marked *

Back to top button