Uncategorized
ಬೆಳಗಾವಿ ಸದಾಶಿವನಗರದಲ್ಲಿ ಅರ್ಧಕ್ಕೆ ನಿಂತ ಚರಂಡಿ ಕಾಮಗಾರಿ: ಮನೆಗಳಿಗೆ ನುಗ್ಗುತ್ತಿರುವ ಮಳೆ ನೀರು ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದ ಮಾಜಿ ಮಹಾಪೌರರು

ಬೆಳಗಾವಿ ಸದಾಶಿವನಗರದಲ್ಲಿ ಅರ್ಧಕ್ಕೆ ನಿಂತ ಚರಂಡಿ ಕಾಮಗಾರಿ: ಮನೆಗಳಿಗೆ ನುಗ್ಗುತ್ತಿರುವ ಮಳೆ ನೀರು
ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದ ಮಾಜಿ ಮಹಾಪೌರರು
ಬೆಳಗಾವಿ ನಗರದ ಸದಾಶಿವನಗರದ 7ನೇ ಕ್ರಾಸ್ನಲ್ಲಿ ಅರ್ಧಕ್ಕೆ ನಿಂತಿರುವ ಚರಂಡಿ ಕಾಮಗಾರಿಯಿಂದಾಗಿ ಕೊಳಚೆ ಹಾಗೂ ಮಳೆ ನೀರು ನೇರವಾಗಿ ಮನೆಗಳಿಗೆ ನುಗ್ಗುತ್ತಿದ್ದು, ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಬೆಳಗಾವಿ ನಗರದ ಸದಾಶಿವನಗರದ 7ನೇ ಕ್ರಾಸ್ನಲ್ಲಿ ಚರಂಡಿ ಅಭಿವೃದ್ಧಿ ಕಾಮಗಾರಿ ಅರ್ಧಕ್ಕೆ ನಿಂತಿರುವುದರಿಂದ ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಮಳೆ ಬಂದಾಗಲೆಲ್ಲಾ ಅರ್ಧಂಬರ್ಧ ಕಾಮಗಾರಿಯಿಂದಾಗಿ ಚರಂಡಿ ಮತ್ತು ಮಳೆ ನೀರು ನೇರವಾಗಿ ಜನರ ಮನೆಗಳಿಗೆ ನುಗ್ಗುತ್ತಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ ಕಾಮಗಾರಿಯನ್ನು ತಕ್ಷಣವೇ ಪೂರ್ಣಗೊಳಿಸುವಂತೆ ಒತ್ತಾಯಿಸಿದ್ದಾರೆ. ಈ ಕುರಿತು ವಾರ್ಡಿನ ನಗರಸೇವಕಿ ಹಾಗೂ ಮಾಜಿ ಮಹಾಪೌರ ಸವಿತಾ ಕಾಂಬಳೆ ಅವರನ್ನು ಸಂಪರ್ಕಿಸಿದಾಗ, ತಾಂತ್ರಿಕ ಕಾರಣಗಳಿಂದಾಗಿ ಕಾಮಗಾರಿ ವಿಳಂಬವಾಗಿದ್ದು,
ಈಗಾಗಲೇ ಟೆಂಡರ್ ರಿ-ಕಾಲ್ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ಶೀಘ್ರದಲ್ಲೇ ಚರಂಡಿ ಮತ್ತು ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವುದಾಗಿ ಅವರು ಭರವಸೆ ನೀಡಿದ್ದಾರೆ



