ಮೈಸೂರ್

ತಾಯಿ, ಹೆಂಡತಿ,ಮಗನಿಗೆ ವಿಷಕೊಟ್ಟು ಕೊನೆಗೆ ತಾನು ನೇಣಿಗೆ ಶರಣು.

ಮೈಸೂರ: ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್​​ನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕೊಲೆ ಹಾಗೂ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ತಾಯಿ, ಪತ್ನಿ ಹಾಗೂ ಮಗನಿಗೆ ವಿಷವುಣಿಸಿದ ಗಂಡಸು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.

ಕುಶಾಲ್ ​(15), ಚೇತನ್​​ (45), ರೂಪಾಲಿ (43), ಪ್ರಿಯಂವಧಾ (62) ಮೃತ ದುರ್ದೈವಿಗಳು. ಚೇತನ್​​​ ಮೊದಲಿಗೆ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್​ಗೆ ವಿಷವುಣಿಸಿ ಸಾಯಿಸಿ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಮೈಸೂರು ಪೊಲೀಸ್ ಕಮಿಷನರ್​ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ, ವಿದ್ಯಾರಣ್ಯಪುರಂ ಇನ್ಸ್​ಪೆಕ್ಟರ್​ ಮೋಹಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button