ರಾಜಕೀಯರಾಜ್ಯ

ನಾನೊಬ್ಬಳು ತಾಯಿಯಾಗಿ, ರೈತನ ಮಗಳಾಗಿ, ಹಲವು ಏಳು ಬೀಳುಗಳ ನಡುವೆ ಇಂದು ಕರ್ನಾಟಕದ ಮಂತ್ರಿಯಾಗಿರುವೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

ನಾನೊಬ್ಬಳು ತಾಯಿಯಾಗಿ, ರೈತನ ಮಗಳಾಗಿ, ಹಲವು ಏಳು ಬೀಳುಗಳ ನಡುವೆ ಇಂದು ಕರ್ನಾಟಕದ ಮಂತ್ರಿಯಾಗಿರುವೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

ನಾನೊಬ್ಬಳು ತಾಯಿಯಾಗಿ, ರೈತನ ಮಗಳಾಗಿ, ಹಲವು ಏಳು ಬೀಳುಗಳ ನಡುವೆ ಇಂದು ಕರ್ನಾಟಕದ ಮಂತ್ರಿಯಾಗಿರುವೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

: ನಾನೊಬ್ಬಳು ತಾಯಿಯಾಗಿ, ರೈತನ ಮಗಳಾಗಿ, ಹಲವು ಏಳು ಬೀಳುಗಳ ನಡುವೆ ಇಂದು ಕರ್ನಾಟಕದ ಮಂತ್ರಿಯಾಗಿರುವೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು.

ಅವರು ಇಂದು ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಜ್ಞಾನಶಕ್ತಿ ಆವರಣ, ತೊರವಿ, ವಿಜಯಪುರ ಆಡಳಿತ ಭವನದ ಮುಂಭಾಗದಲ್ಲಿ‌ ಹಮ್ಮಿಕೊಳ್ಳಲಾಗಿದ್ದ ಶಕ್ತಿ ಸಂಭ್ರಮ-2024 ಅಂತರ್ ಮಹಿಳಾ ವಿಶ್ವವಿದ್ಯಾಲಯಗಳ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪುರುಷರಿಗೆ 100 ಮೀಟರ್ ಓಡಿದರೂ ಗೋಲ್ಡ್ ಮೆಡಲ್ ಸಿಗುತ್ತದೆ.

ಎಲ್ಲಾ ಕ್ಷೇತ್ರದಲ್ಲೂ ಪುರುಷರು ಮುಂದೆ ಬಂದಿದ್ದಾರೆ. ಆದರೆ, ಮಹಿಳೆಯರಿಗೆ ಇನ್ನು ಅವಕಾಶಗಳು ಬೇಕಿರುವುದು ಅತ್ಯವಶ್ಯಕ ಎಂದು ಪ್ರತಿಪಾದಿಸಿದರು. ಕನ್ನಡದ ಪ್ರಪ್ರಥಮ ಮಹಿಳಾ ಕವಿಯತ್ರಿಯಾಗಿ, ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿದ್ದ ಅಕ್ಕಮಹಾದೇವಿ ಅವರು ನಮ್ಮೆಲ್ಲರ ಆದರ್ಶ ಎಂದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವತಿಯಿಂದ ನಡೆದ ಅಂತರ ಮಹಿಳಾ ಮಹಾವಿದ್ಯಾಲಯಗಳ ಯುವ ಜನೋತ್ಸವ ‘ಶಕ್ತಿ ಸಂಭ್ರಮ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸಲ್ಪಟ್ಟಿದ್ದರು ಅಕ್ಕಮಹಾದೇವಿ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೋ.ಬಿ.ಕೆ.ತುಳಸಿಮಾಲ, ಜಿಲ್ಲಾ ಪಂಚಾಯತ್ ಸಿಇಓ ರಿಷಿ ಆನಂದ್, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ತೊರವಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮಾಬಾಯಿ ನಡಗಡ್ಡಿ, ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ, ಪ್ರೊ.ಶಾಂತಾದೇವಿ, ಸಿಂಡಿಕೇಟ್ ಮತ್ತು ಅಕಾಡೆಮಿ ಕೌನ್ಸಿಲ್ ಸದಸ್ಯರು, ಭೋದಕ ಹಾಗೂ ಭೋದಕೇತರ ಸಿಬ್ಬಂದಿ ಹಾಗೂ ಸ್ಪರ್ಧಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button