Uncategorized
ಮಲ್ಲಿಕಾರ್ಜುನ ಖರ್ಗೆ ನಮ್ಮ ಪಕ್ಷದ ವರಿಷ್ಠರು. ದೆಹಲಿಗೆ ಹೋದಾಗ ಅವರನ್ನು ಭೇಟಿ ಆಗಲೇಬೇಕು:ಸತೀಶ ಜಾರಕಿಹೊಳಿ
ದೆಹಲಿಗೆ ಹೋದಾಗ ಅವರನ್ನು ಭೇಟಿ ಆಗಲೇಬೇಕು. ಇದು ಸಹಜ ಭೇಟಿ.

ನಿಪ್ಪಾಣಿ(ಬೆಳಗಾವಿ ಜಿಲ್ಲೆ): ‘ಮಲ್ಲಿಕಾರ್ಜುನ ಖರ್ಗೆ ನಮ್ಮ ಪಕ್ಷದ ವರಿಷ್ಠರು. ದೆಹಲಿಗೆ ಹೋದಾಗ ಅವರನ್ನು ಭೇಟಿ ಆಗಲೇಬೇಕು. ಇದು ಸಹಜ ಭೇಟಿ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಪರಿಶಿಷ್ಟ ಮುಖ್ಯಮಂತ್ರಿ ಕೂಗು ಎದ್ದಿಲ್ಲ.
ಖರ್ಗೆ ಅವರೊಂದಿಗೆ ಮುಡಾ ಪ್ರಕರಣದ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ರಾಜಕೀಯವಾಗಿ ನಮ್ಮ ಸಮಸ್ಯೆಗಳ ಕುರಿತಾಗಿ ಚರ್ಚಿಸಿದ್ದೇವೆ. ಸದ್ಯ ರಾಜ್ಯ ರಾಜಕಾರಣದಲ್ಲಿ ಹೊಸ ಬೆಳವಣಿಗೆ ನಡೆಯುವ ಯಾವ
ಲಕ್ಷಣವೂ ಕಾಣಸಿಗುತ್ತಿಲ್ಲ’ ಎಂದರು.