Uncategorizedರಾಜಕೀಯರಾಜ್ಯ

ವಿಜಯೇಂದ್ರಗೆ ಎಚ್ಚರಿಕೆ ಕೊಟ್ಟ ಅರವಿಂದ ಲಿಂಬಾವಳಿ

ವಿಜಯೇಂದ್ರಗೆ ಎಚ್ಚರಿಕೆ ಕೊಟ್ಟ ಅರವಿಂದ ಲಿಂಬಾವಳಿ

ಡಿಸೆಂಬರ್​ 01: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಅಧ್ಯಕ್ಷ ಮಾಡಿಲ್ಲ‌ ಹುಷಾರ್ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಮಾಜಿ ಸಚಿವ ಅರವಿಂದ ಲಿಂಬಾವಳಿ (Aravind Limbavali) ಎಚ್ಚರಿಕೆ ಕೊಟ್ಟಿದ್ದಾರೆ. ನಗರದ ಗಾಂಧಿ ಭವನದಲ್ಲಿ ವಕ್ಫ್​ ಭೂ ಕಬಳಿಕೆ ವಿರೋಧಿಸಿ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮ್ಮ ಹೊಂದಾಣಿಕೆ ರಾಜಕಾರಣದಿಂದ ವಿರೋಧ ಪಕ್ಷಕ್ಕೆ ಬಂದಿದ್ದೇವೆ ಎಂದು ವಾಗ್ದಾಳಿ ಮಾಡಿದ್ದಾರೆ.

ನೀವು ಏನೇನು ಹೊಂದಾಣಿಕೆ ಮಾಡಿಕೊಂಡಿದ್ದೀರಿ ಈಗ ಹೇಳುವುದಿಲ್ಲ. ಸಲಹೆ ತೆಗೆದುಕೊಂಡು ನಿಮ್ಮ ಟೀಮ್ ತಗೊಂಡು ಪ್ರವಾಸ ಮಾಡಿ. ನಮ್ಮ ಜೊತೆ ಬರಲು ಆಗದಿದ್ದರೆ ನೀವೇ ಪ್ರತ್ಯೇಕವಾಗಿ ಹೋರಾಟ ಮಾಡಿ ಎಂದು ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ.

ಬೀದರ್​ದಿಂದ ವಕ್ಫ್​ ಹೋರಾಟ ಮಾಡುತ್ತಿದ್ದೇವೆ. ನಮಗೆ ಕೆಲವರು ಬೆಂಗಳೂರಿನಲ್ಲಿ ಕುಳಿತು ಪಕ್ಷ ವಿರೋಧಿ ಕೆಲಸ ಅಂತಿದ್ದಾರೆ. ನಾವು ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದೇವಾ‌? ನಾವು ಜನಪರ ಹೋರಾಟ ಮಾಡುತ್ತಿದ್ದೇವೆ ನೀವೇನೂ ಮಾಡುತ್ತಿದ್ದೀರಿ. ಉಪ ಚುನಾವಣೆ ಸೋತ ಮೇಲೆ ಇದನ್ನ ಗಂಭೀರವಾಗಿ ತಗೊಂಡಿಲ್ಲ ಅಂತಾ ಹೇಳ್ಳುತ್ತಾರೆ. ಚುನಾವಣೆ ರಾಜಕೀಯ ಪಕ್ಷಕ್ಕೆ ಗಂಭೀರ ಅಲ್ಲಾ ಅನ್ನೋದಕ್ಕೆ ಏನೂ ಹೇಳಬೇಕು.

Related Articles

Leave a Reply

Your email address will not be published. Required fields are marked *

Back to top button