
ಬೆಳಗಾವಿಯ ಗೃಹಕಚೇರಿಯಲ್ಲಿ ಆಯೋಜಿಸಲಾಗಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಯೋಜನೆಯಡಿ ನೋಂದಾಯಿತ ಕಟ್ಟಡ ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ ನಡೆಸಲಾಯಿತು.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಾರ್ಮಿಕರ ಹಿತದೃಷ್ಟಿಯಿಂದ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ ಶಿಬಿರಗಳನ್ನು ರಾಜ್ಯಾದ್ಯಂತ ಆಯೋಜಿಸಲಾಗುತ್ತಿದ್ದು, ಮುನ್ನೆಚ್ಚರಿಕೆ, ಆರೋಗ್ಯ ರಕ್ಷಣೆ ಮತ್ತು ಔಷಧಗಳು ಕಾರ್ಮಿಕರನ್ನು ಅನಾರೋಗ್ಯದಿಂದ ರಕ್ಷಿಸುವುದಲ್ಲದೆ ಭವಿಷ್ಯದ ಖಾಯಿಲೆಗಳಿಂದಲೂ ರಕ್ಷಿಸುವ ಮುಖ್ಯ ಶಿಬಿರವಾಗಿದೆ.
ಶಿಬಿರದಲ್ಲಿ ಕಾರ್ಮಿಕ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು, ಕಚೇರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಜೆ.ಬಿ.ಬಾಗೋಜಿಕೊಪ್ಪ, ಕಾರ್ಮಿಕರು, ಆರೋಗ್ಯ ಇಲಾಖೆಯ ಸಿಬ್ಬಂದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.