ರಾಜಕೀಯರಾಜ್ಯ

ಸತೀಶ್ ಜಾರಕಿಹೊಳಿ ವಿರುದ್ಧದ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಪ್ರಕರಣವನ್ನು ಹೈಕೋರ್ಟ್​ ರದ್ದುಗೊಳಿಸಿದೆ.

ಸತೀಶ್ ಜಾರಕಿಹೊಳಿ ವಿರುದ್ಧದ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಪ್ರಕರಣವನ್ನು ಹೈಕೋರ್ಟ್​ ರದ್ದುಗೊಳಿಸಿದೆ.

ಬೆಂಗಳೂರು, (ಡಿಸೆಂಬರ್ 12): ಸಚಿವ ಸತೀಶ್ ಜಾರಕಿಹೊಳಿ ವಿರುದ್ಧದ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಪ್ರಕರಣವನ್ನು ಹೈಕೋರ್ಟ್​ ರದ್ದುಗೊಳಿಸಿದೆ. ಹಿಂದೂ ಧರ್ಮ‌ ನಿಂದನೆ‌ ಮೂಲಕ ಅಶಾಂತಿ ಮೂಡಿಸಲು ಯತ್ನ, ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಯತ್ನಿಸಿದ್ದಾರೆಂದು ವಕೀಲ ಕೆ.ದಿಲೀಪ್ ಕುಮಾರ್ ಅವರು ದಾಖಲಿಸಿದ್ದ ಖಾಸಗಿ ದೂರನ್ನು ಇಂದು (ಡಿಸೆಂಬರ್ 12) ಹೈಕೋರ್ಟ್​ ರದ್ದುಪಡಿಸಿದೆ ಇದರಿಂದ ಸಚಿವ ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಪ್ರಕರಣ ಹಿನ್ನೆಲೆ

2022ರ ನವೆಂಬರ್​ನಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಆಯೋಜಿಸಲಾಗಿದ್ದ ಮಾನವ ಬಂದುತ್ವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಚಿವ ಸತೀಶ್​ ಜಾರಕಿಹೊಳಿ, ಹಿಂದೂ ಎಂಬ ಪದ ಎಲ್ಲಿಂದ ಬಂತು? ಇದು ನಮ್ಮ ಪದವಲ್ಲ ಪರ್ಷಿಯನ್​ನಿಂದ ಬಂದಿದ್ದು. ಭಾರತಕ್ಕೂ ಪರ್ಷಿಯನ್​ಗೂ ಏನು ಸಂಬಂಧ? ಎಂದು ಹೇಳಿದ್ದರು.  ಮುಂದುವರೆದು ಹಿಂದೂ ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್​ ಪದ, ಹಿಂದೂ ನಮ್ಮದು ಹೇಗೆ ಆಯಿತು ಅನ್ನೋದು ಚರ್ಚೆ ಆಗಬೇಕಿದೆ. ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದು ನಿಮಗೆ ತಿಳಿದರೆ ನಾಚಿಕೆ ಆಗುತ್ತೆ. ಎಲ್ಲಿಂದಲೋ ಬಂದಿರುವ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ ಎಂದು ಅವಹೇಳಕಾರಿ ಹೇಳಿಕೆ ನೀಡಿದ್ದರು

ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಖುದ್ದು ಡಿಕೆ ಶಿವಕುಮಾರ್ ಅವರೇ ಈ ಹೇಳಿಕೆಯನ್ನು ಖಂಡಿಸಿದ್ದರು, ಅಲ್ಲದೇ ತಮ್ಮ ಹೇಳಿಕೆ ವಾಪಸ್ ಪಡೆಯುವಂತೆ ಸತೀಶ್ ಜಾರಕಿಹೊಳಿಗೆ ಸೂಚಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button