Uncategorized

ಲಾಠಿ ಏಟಿನ ವಿರುದ್ಧ ಧಾರವಾಡ ಹೈಕೋರ್ಟ್‌ ಮೆಟ್ಟಿಲೇರಿದ ಜಯಮೃತ್ಯುಂಜಯ ಸ್ವಾಮೀಜಿ…ಸರ್ಕಾರ, ಗೃಹ ಇಲಾಖೆ, ಪೊಲೀಸ್‌ ಇಲಾಖೆಗೆ ನೋಟಿಸ್ ಜಾರಿಯಾಗಿದೆ-

ಲಾಠಿ ಏಟಿನ ವಿರುದ್ಧ ಧಾರವಾಡ ಹೈಕೋರ್ಟ್‌ ಮೆಟ್ಟಿಲೇರಿದ ಜಯಮೃತ್ಯುಂಜಯ ಸ್ವಾಮೀಜಿ…ಸರ್ಕಾರ, ಗೃಹ ಇಲಾಖೆ, ಪೊಲೀಸ್‌ ಇಲಾಖೆಗೆ ನೋಟಿಸ್ ಜಾರಿಯಾಗಿದೆ-
ಜಯ ಮೃತ್ಯುಂಜಯ ಶ್ರೀಬೆಳಗಾವಿಯ ಸುವರ್ಣಸೌಧದ ಎದುರು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸಂಬಂಧ ನಡೆದಿದ್ದ ಹೋರಾಟದ ವೇಳೆ, ಪೊಲೀಸ್ ಇಲಾಖೆಯಿಂದ ನಡೆದಿದ್ದ ಲಾಠಿ ಚಾರ್ಜ್ ಪ್ರಶ್ನಿಸಿ ಇದೀಗ ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೈಕೋರ್ಟ್‌ ಮೆಟ್ಟಿಲೇರಿದ್ದು, ಇದೇ ವಿಚಾರಕ್ಕೆ ಈಗ ಸರ್ಕಾರ, ಗೃಹ ಇಲಾಖೆ,
ಪೊಲೀಸ್‌ ಇಲಾಖೆಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ ಎಂದು ಜಯ ಮೃತ್ಯುಂಜಯ ಶ್ರೀಗಳು ತಿಳಿಸಿದ್ದಾರೆ.‌
ಈ ಕುರಿತು ಧಾರವಾಡದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ವಾಮೀಜಿ, ಧಾರವಾಡದ ಹೈಕೋರ್ಟ್‌ನಲ್ಲಿ ಲಾಠಿ ಚಾರ್ಜ್ ಮಾಡಿರುವುದನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ಧಾರವಾಡ ಐಕೋರ್ಟ ಏಕ ಸದಸ್ಯ ಪೀಠ ಈಗ ಸರ್ಕಾರ, ಗೃಹ ಇಲಾಖೆ, ಪೊಲೀಸ್‌ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ. ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ವಕೀಲರ ಪರಿಷತ್ ಸೇರಿದಂತೆ ನಾಲ್ವರಿಂದ ಈ ರಿಟ್ ಅರ್ಜಿ ಸಲ್ಲಿಸಲಾಗಿದೆ.
ಲಾಠಿ ಚಾರ್ಜ್ ಮಾಡಿದ ಮೇಲೆ 12 ಜನ ಹೋರಾಟಗಾರರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಅದನ್ನು ರದ್ದುಪಡಿಸಬೇಕು ಎಂದು ನಾವು ಕೇಳಿದ್ದೆವು. ಸಿಎಂ ಕ್ಷಮೆಯಾಚಿಸಬೇಕು ಎಂದೂ ಕೇಳಿದ್ದೆವು ಆದರೆ, ಸಿಎಂ ಯಾವುದಕ್ಕೂ ಸ್ಪಂದಿಸಲಿಲ್ಲ. ಹೀಗಾಗಿ ಕೋರ್ಟ್‌ ಮೊರೆ ಹೋಗಿದ್ದೇವೆ.
ನಮ್ಮ ಪರವಾಗಿ ಪ್ರಭುಲಿಂಗ ನಾವದಗಿ, ಪೂಜಾ ಸವದತ್ತಿ ವಾದ ಮಂಡಿಸಿದ್ದಾರೆ. ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಆಗಿದೆ. ನಾವು ಅನಿವಾರ್ಯವಾಗಿ ನ್ಯಾಯಾಲಯದ ಮೊರೆ ಹೋಗಿದ್ದೇವೆ. ಹಲ್ಲೆ ಆಗಿದ್ದಕ್ಕೆ ಸಮಾಜದವರು ಧೃತಿಗೆಡುವುದು ಬೇಡ. ಹಲ್ಲೆ ಆದವರಿಗೆ ಆತ್ಮಸ್ಥೆರ್ಯ ತುಂಬಲಿದ್ದೇವೆ. ಬೆಳಗಾವಿಯಲ್ಲಿ ಗಾಯಗೊಂಡವರ ಮನೆ, ಮನೆಗೆ ಡಿಸೆಂಬರ್ 23

Related Articles

Leave a Reply

Your email address will not be published. Required fields are marked *

Back to top button