ಹಾವೇರಿ
ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ ಮಹಿಳೆ; ಆಸ್ಪತ್ರೆಯಲ್ಲಿಯೇ ಸಾವು.

ಹಾವೇರಿ: ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವನ್ನಪ್ಪಿರುವಂತಹ (death) ಘಟನೆ ನಗರದ ವೀರಾಪುರ ಆಸ್ಪತ್ರೆಯಲ್ಲಿ ನಡೆದಿದೆ. ಬ್ಯಾಡಗಿ ಪಟ್ಟಣದ ಶಮಿನಾ ಬಾನು ಅರಳಿಕಟ್ಟಿ(23) ಮೃತ ಮಹಿಳೆ.
ಮೆಡಿಸಿನ್ ಓವರ್ಡೋಸ್ ಮತ್ತು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾಳೆಂದು ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆ ವಿರುದ್ಧ ಮಹಿಳಾ ಪೋಷಕರಿಂದ ಪ್ರತಿಭಟನೆ ಮಾಡಲಾಗಿದೆ.
ಬ್ಯಾಡಗಿಯ 23 ವರ್ಷದ ಮಹಿಳೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದಾಗ ಹಾವೇರಿಯ ವೀರಾಪುರ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಅವರು ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ. ಕುಟುಂಬಸ್ಥರು ಆಸ್ಪತ್ರೆ ವೈದ್ಯರು ಅತಿಯಾದ ಔಷಧಿ ನೀಡಿದ್ದರಿಂದ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದು, ಆಸ್ಪತ್ರೆಯ ಮುಂದೆ ಪ್ರತಿಭಟನೆ ಮಾಡಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಆರೋಪಿಸಿದ್ದಾರೆ.