Uncategorized

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಸರ್ಕಾರಕ್ಕೆ ಒತ್ತಾಯ

ಬೆಂಗಳೂರು: ಬೆಳಗಾವಿ ಚಳಿಗಾಲ ಅಧಿವೇಶನದ ವಿಧಾನಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿರುವ ಆರೋಪ ಸಂಬಂಧ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಸರ್ಕಾರವನ್ನು ಒತ್ತಾಯಿಸಿದೆ.

ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿರುವ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ, ”ಭಾರತದಲ್ಲಿ ಹೆಣ್ಣುಮಕ್ಕಳಿಗೆ ವಿಶೇಷ ಸ್ಥಾನಮಾನ ಮತ್ತು ಗೌರವ ನೀಡಲಾಗಿದೆ. ನಾಲಿಗೆಯು ನಾಗರಿಕತೆಯನ್ನ ಹೇಳುತ್ತದೆ. ಜನಪ್ರತಿನಿಧಿಗಳಾದವರು ಸದನದ ಗೌರವ, ಘನತೆ ಕಾಪಾಡಬೇಕು” ಎಂದಿದ್ದಾರೆ.ಸದನದ ಒಳಗೆ ಹಾಗೂ ಹೊರಗೆ ಜನಪ್ರತಿನಿಧಿಗಳ ನಡವಳಿಕೆಗಳು ಇತರರಿಗೆ ಮಾದರಿಯಾಗಿರಬೇಕು. ಸಿ.ಟಿ.ರವಿ ಅವರು ಅಸಾಂವಿಧಾನಿಕ ಪದಬಳಕೆ ಮಾಡಿರುವುದು ಸದನದ ಇತಿಹಾಸಕ್ಕೆ ಕಪ್ಪುಚುಕ್ಕೆಯಾಗಿದೆ. ಸಿ.ಟಿ.ರವಿ ಅವರ ವಿರುದ್ಧ ಅಗತ್ಯ ಕಾನೂನು ಕ್ರಮಕೈಗೊಳ್ಳಬೇಕು” ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಶಾಮನೂರು ಶಿವಶಂಕರಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button