ಬೆಂಗಳೂರು

“ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾರೂ ದುರ್ವರ್ತನೆ ಮಾಡುವಂತಿಲ್ಲ” ಡಿ.ಕೆ.ಶಿ ಖಡಕ್ ಎಚ್ಚರಿಕೆ.

ಬೆಂಗಳೂರು: ”ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾರೂ ಸಹ ದುರ್ವರ್ತನೆ ಮಾಡುವಂತಿಲ್ಲ. ಕಾನೂನು ಉಲ್ಲಂಘನೆ ಮಾಡುವಂತಿಲ್ಲ. ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದನ್ನು ಮನವಿ ಎಂದಾದರೂ ಪರಿಗಣಿಸಿ, ಇಲ್ಲವೇ ಎಚ್ಚರಿಕೆ ಎಂದಾದರೂ ಪರಿಗಣಿಸಿ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್​ ಸಂದೇಶ ರವಾನಿಸಿದರು.

ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 7 ದಿನ ಶೋಕಾಚರಣೆ ಘೋಷಣೆ ಮಾಡಿದ್ದು, ಸರ್ಕಾರಿ ಕಾರ್ಯಕ್ರಮ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳನ್ನು ಮಾತ್ರ ಆಚರಿಸುತ್ತಿಲ್ಲ. ಖಾಸಗಿ ಕಾರ್ಯಕ್ರಮಗಳಲ್ಲಿ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಹೀಗಾಗಿ, ಖಾಸಗಿಯಾಗಿ ಹೊಸ ವರ್ಷಾಚರಣೆ ಮಾಡುವವರು ಮಾಡಿಕೊಳ್ಳಬಹುದು” ಎಂದರು.

Related Articles

Leave a Reply

Your email address will not be published. Required fields are marked *

Back to top button