
ಬಹುಮತದಿಂದ ಬಿಜೆಪಿ ಮುಂದಿನ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೆ…
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿಶ್ವಾಸ
ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ ಅಷ್ಟೇ ಮುಂದಿನ ಚುನಾವಣೆಯಲ್ಲಿ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ಬರುವುದು ಸತ್ಯ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ತಮ್ಮ 87ನೇ ಹುಟ್ಟುಹಬ್ಬವನ್ನು ಆಚರಿಸಿದ ನಾಯಕರಿಗೆ, ಕಾರ್ಯಕರ್ತರಿಗೆ ಮತ್ತು ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ ಅವರು, ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ರಾಜ್ಯದ ಜನರು ಅವಕಾಶ ನೀಡಿದ್ದು ನಮ್ಮ ಸೌಭಾಗ್ಯ. ಪಿಎಂ ಮೋದಿ ದೇಶದಲ್ಲಿ ಒಳ್ಳೆಯ ಆಡಳಿತವನ್ನು ನೀಡುತ್ತಿದ್ದು, ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಆಡಳಿತಕ್ಕೆ ತರಲು ಶ್ರಮಿಸಲಾಗುವುದು. ಬಿಜೆಪಿ ಮುಂದಿನ ಬಾರಿ ಬಹುಮತದಿಂದ ಅಧಿಕಾರ ರಚನೆ ಮಾಡುವುದು ಸೂರ್ಯ ಚಂದ್ರರಿರುವಷ್ಟು ಸತ್ಯ ಎಂದರು.
ಇನ್ನು , ಪ್ರತಿ ಜಿಲ್ಲೆಯಲ್ಲೂ ಪ್ರವಾಸ ಕೈಗೊಂಡು ಕಾರ್ಯಕರ್ತರ ಹುಮ್ಮಸ್ಸನ್ನು ಇಮ್ಮಡಿಗೊಳಿಸಿ, ರಾಜ್ಯದಲ್ಲಿರುವ ಭ್ರಷ್ಟ ಸರ್ಕಾರವನ್ನು ಕಿತ್ತೊಗೆದು, ಅಭಿವೃದ್ಧಿ ಪರ ಸರ್ಕಾರವನ್ನು ಅಧಿಕಾರಕ್ಕೆ ತರಲು ಶಕ್ತಿಯನ್ನು ಮೀರಿ ಶ್ರಮಿಸಲಾಗುವುದು. ಪಕ್ಷದಲ್ಲಿರುವ ಗೊಂದಲಗಳನ್ನು ಸರಿಪಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಂಸದರಾದ ಬಸವರಾಜ್ ಬೊಮ್ಮಾಯಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.