
ಶಾಸಕ ಯತ್ನಾಳರ ಕ್ಷೇತ್ರದಲ್ಲಿ ಮಾಜಿ ಸಿಎಂ ಬಿಎಸ್ವೈ ಜನ್ಮದಿನ ಅದ್ದೂರಿಯಾಗಿ ಆಚರಣೆ
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಸಮರ ಸಾರಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳರ ಕ್ಷೇತ್ರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡುವ ಮೂಲಕ ಶಾಸಕ ಯತ್ನಾಳರಿಗೆ ಟಾಂಗ್ ಕೊಟ್ಟಿದ್ದಾರೆ.
ಬಿಜೆಪಿ ಕಾರ್ಯಕರ್ತರು ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಯಡಿಯೂರಪ್ಪ ಹೆಸರಿನಲ್ಲಿ ಪೂಜೆ ಮಾಡಿಸಿ ಘೋಷಣೆ ಕೂಗಿದ್ದಾರೆ
ಯತ್ನಾಳ್ ಶಾಸಕರಾದ ಬಳಿಕ ಸಾಂಕೇತಿಕವಾಗಿ ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದರು. ಆದರೆ ಈ ವರ್ಷ ವಿಜೃಂಭಣೆಯಿಂದ ಹುಟ್ಟು ಹಬ್ಬ ಆಚರಣೆ ಮಾಡಿದ್ದಾರೆ. ಸಿದ್ದೇಶ್ವರ ದೇವಸ್ಥಾನದ ಮುಂಭಾಗ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ರಾಜಾಹುಲಿ ಯಡಿಯೂರಪ್ಪ ಎಂದು ಘೋಷಣೆ ಕೂಗಿ ಸಂಭ್ರಮಿಸಿ ಮಾಜಿ ಸಿಎಂ ಯಡಿಯೂರಪ್ಪ ಹುಟ್ಟುಹಬ್ಬ ಅದ್ದೂರಿ ಆಚರಣೆ ಮೂಲಕ ಯತ್ನಾಳ್ ಗೆ ಟಾಂಗ್ ಕೊಟ್ಟಿದ್ದಾರೆ.
ಈ ವೇಳೆ ಬಿಡಿಎ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ, ಈರಣ್ಣಾ ಪಟ್ಟಣಶೆಟ್ಟಿ, ಶರತ್ ಬಿರಾದಾರ, ಜಗದೀಶ ಮುಚ್ಚಂಡಿ, ರಾಜೇಶ ತಾವಸೆ, ಆನಂದ ಮುಚ್ಚಂಡಿ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.