Uncategorized
ಕೆಎಲ್ಇ ಬಿ.ವಿ. ಬೆಲ್ಲದ ಕಾನೂನು ಕಾಲೇಜನಲ್ಲಿ ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆ ತರಬೇತಿ

ಬೆಳಗಾವಿ : ಕೆಎಲ್ಇ ಬಿ.ವಿ. ಬೆಲ್ಲದ ಕಾನೂನು ಕಾಲೇಜನಲ್ಲಿ ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆ ತರಬೇತಿ
ಬೆಳಗಾವಿಯ ಕೆ ಎಲ್ ಇ ಬಿ.ವಿ ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆಗಾಗಿ ತರಬೇತಿ ಆಯೋಜಿಸಲಾಗಿತ್ತು
1975 ರಲ್ಲಿ ಸ್ಥಾಪನೆಯಾದ ಸಂಸ್ಥೆಯ ಸುವರ್ಣ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಈ ನಿಟ್ಟಿನಲ್ಲಿ ವಿದ್ಯಾರ್ಥಿನಿಯರಿಗೆ ಅಂತರರಾಷ್ಟ್ರೀಯ ಜೂಡೋ ಆಟಗಾರ್ತಿ, ತರಬೇತುದಾರ ಮತ್ತು ಏಕಲವ್ಯ ಪ್ರಶಸ್ತಿ ಪುರಸ್ಕೃತೆ ಮಿಸ್
ರೋಹಿಣಿ ಪಾಟೀಲ್ ಅವರು ಲಾ ಕಾಲೇಜಿನ ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆಗಾಗಿ ತರಬೇತಿ ನೀಡಿದರು.
ಈ ಸಂದರ್ಭದಲ್ಲಿ. ಪ್ರಾಂಶುಪಾಲರಾದ ಶ್ರೀಮತಿ ಜ್ಯೋತಿ ಹಿರೇಮಠ ಮತ್ತು ದೈಹಿಕ ನಿರ್ದೇಶಕಿ ಶ್ರೀಮತಿ ರಿಚಾ ರಾವ್ ಉಪಸ್ಥಿತರಿದ್ದರು.