Uncategorized
ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತ

ಬೆಂಗಳೂರು: ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಬು ಸಾ ಪಾಳ್ಯದಲ್ಲಿ ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತ ಅವಘಡದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದ್ದು ಇದುವರೆಗೂ ಐದು ಕಾರ್ಮಿಕರ ಮೃತದೇಹ ಹೊರಕ್ಕೆ ತೆಗೆಯಲಾಗಿದೆ.
ಅಗ್ನಿಶಾಮಕ ದಳ ಹಾಗೂ ಎನ್‌ಡಿಆರ್‌ಎಫ್ ಸಿಬ್ಬಂದಿ ರಾತ್ರಿ ಇಡೀ ಕಾರ್ಯಾಚರಣೆ ನಡೆಸಿದರು.
ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದ ಅರ್ಮಾನ್, ಮೊಹ್ಮದ್ ಸಾಹಿಲ್, ತಿರುಪಾಲಿ ಸೇರಿದಂತೆ ಐವರ ಮೃತದೇಹ ಪತ್ತೆಯಾಗಿದ್ದು ಹೊರಕ್ಕೆ ತೆಗೆಯಲಾಗಿದೆ.
ಬದುಕಿ ಬಂದ ಅಯಾನ್: ಕಟ್ಟಡಗಳ ಅವಶೇಷಗಳಡಿ ಸಿಲುಕಿದ್ದ ಅಯಾನ್ ಅವರನ್ನು 13 ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ರಕ್ಷಣೆ ಮಾಡಲಾಗಿದೆ. ಸ್ಥಳದಲ್ಲಿ ಆಂಬುಲೆನ್ಸ್‌ನಲ್ಲಿ ಅವರನ್ನು ಆಸ್ಪತ್ರೆ ಕರೆದೊಯ್ಯಲಾಗಿದೆ. ನಾಪತ್ತೆಯಾದ ಇಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.