
ಬೆಂಗಳೂರು: ಬೆಂಗಳೂರು ಈಶಾನ್ಯ ಮಾನ್ಸೂನ್ ಪ್ರಭಾವಕ್ಕೆ ಸಾಕ್ಷಿಯಾಗಿದ್ದು, ಕಳೆದ ಐದು ದಿನಗಳಿಂದ ಸಾಧಾರಣದಿಂದ ಭಾರಿ ಮಳೆಯಾಗುತ್ತಿದೆ.
ಮಳೆಯಿಂದಾಗಿ ನಗರದ ಹಲವಾರು ಭಾಗಗಳಲ್ಲಿ ತೀವ್ರ ಜಲಾವೃತವಾಗಿದೆ. ಭಾರಿ ಮಳೆಯಿಂದಾಗಿ ಅಕ್ಟೋಬರ್ 23 ರಂದು ಎಲ್ಲಾ ಶಾಲೆಗಳು (ಸರ್ಕಾರಿ ಮತ್ತು ಖಾಸಗಿ) ಮತ್ತು ಅಂಗನವಾಡಿಗಳನ್ನು ಮುಚ್ಚಲಾಗಿದೆ.
ರಾಜಧಾನಿಯಲ್ಲಿ ಈ ವಾರ ಭಾರಿ ಮಳೆ ಮುಂದುವರಿಯುತ್ತದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಕೊಡಗು ತುಮಕೂರು, ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.